
ದುಬೈನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹಾಂಗ್ ಕಾಂಗ್ ಚೀನಾ ವಿರುದ್ಧದ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡುವ ಮೂಲಕ ಎರಡೆರಡು ವಿಶ್ವದಾಖಲೆಗಳನ್ನು ಮುರಿದಿದ್ದ ಸ್ಮೃತಿ ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ(PC-PTI).
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ನಡುವಿನ ಏಷ್ಯಾಕಪ್ ಪಂದ್ಯ ಸೆಪ್ಟೆಂಬರ್ 5 ರ ಶನಿವಾರದಂದು ನಡೆಯಲಿದೆ. ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಪ್ರಮುಖ ದಾಖಲೆಯನ್ನು ಮುರಿಯಲಿದ್ದಾರೆ. ಅಂದರೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು 50 ಪ್ಲಸ್ ಸ್ಕೋರ್‌ಗಳ ಇನ್ನಿಂಗ್ಸ್ ಆಡಿದವರ ಪಟ್ಟಿಯಲ್ಲಿ ಮಂಧಾನ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಲಿದ್ದಾರೆ(PC-PTI).
ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ಸ್ಕೋರ್‌ಗಳ ಇನ್ನಿಂಗ್ಸ್ ಆಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಮತ್ತು ರೋಹಿತ್ ಶರ್ಮಾ ಪ್ರಸ್ತುತ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಟಿ20ಯಲ್ಲಿ 37 ಬಾರಿ 50 ಪ್ಲಸ್ ರನ್ಗಳ ಇನ್ನಿಂಗ್ಸ್ ಆಡಿದ್ದರೆ, ಇತ್ತ ಸ್ಮೃತಿ ಮಂಧಾನ ಕೂಡ 37 ಬಾರಿ ಈ ಸಾಧನೆ ಮಾಡಿದ್ದಾರೆ(PC-PTI).
ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಮೃತಿ ಮಂಧಾನ 50 ರನ್ಗಳ ಗಡಿ ದಾಟಿದರೆ, ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನದಲ್ಲಿ ಉಳಿಯುತ್ತಾರೆ. ಇತ್ತ ರೋಹಿತ್ ಶರ್ಮಾ ಮೂರನೇ ಸ್ಥಾನಕ್ಕೆ ಕುಸಿಯಲಿದ್ದಾರೆ(PC-PTI).
ಅಂತರರಾಷ್ಟ್ರೀಯ ಟಿ20ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50+ ಇನ್ನಿಂಗ್ಸ್ ಆಡಿರುವ ಭಾರತೀಯ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಇದುವರೆಗೆ 39 ಬಾರಿ ಈ ಸಾಧನೆ ಮಾಡಿದ್ದಾರೆ. ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಪ್ರಸ್ತುತ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 29 ಬಾರಿ 50+ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ(PC-PTI).
24 ಬಾರಿ ಈ ಸಾಧನೆ ಮಾಡಿರುವ ಕನ್ನಡಿಗ ಕೆಎಲ್ ರಾಹುಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಮತ್ತು ಶಫಾಲಿ ವರ್ಮಾ ಈ ಪಟ್ಟಿಯಲ್ಲಿ ಜಂಟಿಯಾಗಿ ಐದನೇ ಸ್ಥಾನದಲ್ಲಿದ್ದು, ಇವರಿಬ್ಬರು ತಲಾ 19 ಬಾರಿ ಈ ಸಾಧನೆ ಮಾಡಿದ್ದಾರೆ. ಮಿಥಾಲಿ ರಾಜ್ ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, ಜೆಮಿಮಾ ರೊಡ್ರಿಗಸ್ ಏಳನೇ ಸ್ಥಾನದಲ್ಲಿದ್ದಾರೆ. ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ 8 ನೇ ಸ್ಥಾನದಲ್ಲಿದ್ದಾರೆ(PC-PTI).
Published On - 5:37 pm, Sat, 5 September 26