AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಅಬ್ಬರ… 48 ವರ್ಷಗಳ ಹಳೆಯ ದಾಖಲೆ ಧೂಳೀಪಟ

Sonal Dinusha Records: ಕೊಲಂಬೋದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್‌ನ ಅಂತಿಮ ದಿನ, ಲಂಕಾ ಆಲ್-ರೌಂಡರ್ ಸೋನಲ್ ದಿನುಷಾ ಬಲಿಷ್ಠ ಭಾರತೀಯ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿ 48 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ಪ್ರದರ್ಶನದೊಂದಿಗೆ ದಿನುಷಾ ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 27, 2026 | 2:13 PM

Share
ವಿಶ್ವ ಕ್ರಿಕೆಟ್‌ನ ಯಾವುದೇ ಯುವ ಬ್ಯಾಟರ್‌ಗೆ ಟೀಮ್ ಇಂಡಿಯಾದ ಬಲಿಷ್ಠ ಬೌಲಿಂಗ್ ಪಡೆಯನ್ನು ಎದುರಿಸುವುದೆಂದರೆ ಅದೊಂದು ಅಗ್ನಿಪರೀಕ್ಷೆ. ಆದರೆ, ಶ್ರೀಲಂಕಾದ 25 ವರ್ಷದ ಯುವ ಆಲ್-ರೌಂಡರ್ ಸೋನಲ್ ದಿನುಷಾ ಪಾಲಿಗೆ ಭಾರತದ ಬೌಲಿಂಗ್ ತೀರಾ ಸುಲಭವಾದಂತೆ ಕಾಣುತ್ತಿದೆ! ಇದಕ್ಕೆ ಸಾಕ್ಷಿ ಕಳೆದ 4 ಇನಿಂಗ್ಸ್​​​ಗಳಲ್ಲಿ ಅವರು ಕಲೆಹಾಕಿದ ರನ್​ ರಾಶಿ. (PC: Getty Images)

1 / 5
ಭಾರತದ ವಿರುದ್ಧ ಆಡಿದ ತನ್ನ ಮೊದಲ ನಾಲ್ಕೂ ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಸತತವಾಗಿ 50ಕ್ಕೂ ಹೆಚ್ಚು ರನ್ ಗಳಿಸಿರುವ ಸೋನಲ್ ದಿನುಷಾ, ಟೆಸ್ಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ವಿರುದ್ಧ ಈ ಅಪರೂಪದ ಸಾಧನೆ ಮಾಡಿದ 'ಏಷ್ಯಾದ ಮೊದಲ' ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (PC: Getty Images)

2 / 5
ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 100 ಹಾಗೂ 84 ರನ್​ ಬಾರಿಸಿದ್ದ ದಿನುಷಾ, ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 103 ರನ್​ಗಳ ಶತಕ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​​​ನಲ್ಲೂ 50+ ಸ್ಕೋರ್​ಗಳಿಸುವ ಮೂಲಕ ಬ್ಯಾಕ್ ಟು ಬ್ಯಾಕ್ 4 ಇನಿಂಗ್ಸ್​ಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆ ನಿರ್ಮಿಸಿದ್ದಾರೆ. (PC: Getty Images)

3 / 5
ಈ ದಾಖಲೆಯೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಇತಿಹಾಸದಲ್ಲೇ ಸತತ 4 ಇನ್ನಿಂಗ್ಸ್‌ಗಳಲ್ಲಿ 50+ ಸ್ಕೋರ್ ಗಳಿಸಿದ ಏಷ್ಯಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಝಹೀರ್ ಅಬ್ಬಾಸ್ ಅವರ ಹೆಸರಿನಲ್ಲಿತ್ತು. 1978ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸತತ 3 ಇನ್ನಿಂಗ್ಸ್‌ಗಳಲ್ಲಿ 50 ಪ್ಲಸ್ ರನ್ ಗಳಿಸಿ ಈ ದಾಖಲೆ ನಿರ್ಮಿಸಿದ್ದರು. (PC: Getty Images)

4 / 5
ಇದೀಗ ಸೋನಲ್ ದಿನುಷಾ ಟೀಮ್ ಇಂಡಿಯಾ ವಿರುದ್ಧ ಸತತ 4 ಇನಿಂಗ್ಸ್​ಗಳಲ್ಲೂ 50+ ಸ್ಕೋರ್​ ಗಳಿಸಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಈ ಸಾಧನೆ ಮಾಡಿದ ಏಷ್ಯಾದ ಮೊದಲ ಬ್ಯಾಟರ್ ಹಾಗೂ ಶ್ರೀಲಂಕಾದ ಏಕೈಕ ದಾಂಡಿಗ ಎನಿಸಿಕೊಂಡಿದ್ದಾರೆ.  (PC: Getty Images)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು

ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ

‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು

ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ

ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ

ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ

ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್