AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನಿವೃತ್ತಿ ಘೋಷಿಸಲು ನಿರ್ಧರಿಸಿದ ಸೋಫಿ ಡಿವೈನ್

Sophie Devine: ಸೋಫಿ ಡಿವೈನ್ ನ್ಯೂಝಿಲೆಂಡ್ ಪರ ಈವರೆಗೆ 151 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 139 ಇನಿಂಗ್ಸ್ ಆಡಿರುವ ಅವರು 8 ಭರ್ಜರಿ ಶತಕ ಹಾಗೂ 16 ಅರ್ಧಶತಕಗಳೊಂದಿಗೆ 3990 ರನ್ ಕಲೆಹಾಕಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ 70 ಸಿಕ್ಸ್​ ಹಾಗೂ 385 ಫೋರ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2025 | 7:55 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ಅದು ಕೂಡ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವಿಶ್ವಕಪ್ ಮೂಲಕ ಎಂಬುದು ವಿಶೇಷ. ಸೆಪ್ಟೆಂಬರ್ 30 ರಿಂದ ಶುರುವಾಗಲಿರುವ ಈ ಬಾರಿಯ ಒಡಿಐ ವರ್ಲ್ಡ್​​ಕಪ್​ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯವಹಿಸಲಿದೆ. ಈ ಟೂರ್ನಿಯ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯಲಿದೆ.

1 / 5
ಈ ಪಂದ್ಯಗಳ ಮೂಲಕ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಅದುವೇ ಸೋಫಿ ಡಿವೈನ್ ಅವರ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಇತ್ತ ಏಕದಿನ ವಿಶ್ವಕಪ್ 2025ರ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಪಾಕ್ ತಂಡವು ಫೈನಲ್​ಗೆ ಪ್ರವೇಶಿಸಿದರೆ ಮಾತ್ರ ಅಂತಿಮ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.

2 / 5
ಇನ್ನು ಬೇರೆ ಯಾವುದೇ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಸೋಫಿ ಡಿವೈನ್ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಏಕದಿನ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ನ್ಯೂಝಿಲೆಂಡ್ ತಂಡವು ಫೈನಲ್​ಗೆ ಪ್ರವೇಶಿಸಲು ವಿಫಲರಾದರೆ, ಕಿವೀಸ್ ಪಡೆ ಆಡುವ ಕೊನೆಯ ಪಂದ್ಯವೇ ಸೋಫಿ ಅವರ ಅಂತಿಮ ಒಡಿಐ ಪಂದ್ಯವಾಗಿರಲಿದೆ.

3 / 5
ಅಂದಹಾಗೆ ಸೋಫಿ ಡಿವೈನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್ ಆಟಗಾರ್ತಿ. ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಡಿವೈನ್ 2024 ರಲ್ಲಿ ರಾಯಲ್ ಪಡೆ ಚಾಂಪಿಯನ್ ಪಟ್ಟಕ್ಕೇರಲು ಪ್ರಮುಖ ಪಾತ್ರವಹಿಸಿದ್ದರು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು 2025 ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

4 / 5
ಇದೀಗ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿರುವ ಸೋಫಿ ಡಿವೈನ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲೂ ಕಾಣಿಸಿಕೊಳ್ಳುವುದಾಗಿ 35 ವರ್ಷದ ಕಿವೀಸ್ ಆಟಗಾರ್ತಿ ತಿಳಿಸಿದ್ದಾರೆ. ಅದರಂತೆ ಈ ಬಾರಿಯ ವಿಶ್ವಕಪ್ ಸೋಫಿ ಡಿವೈನ್ ಪಾಲಿನ ಕೊನೆಯ ಐಸಿಸಿ ಏಕದಿನ ಟೂರ್ನಿ ಆಗಿರಲಿದೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್

2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ

ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ

ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ

VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ