ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ ಸೌತ್ ಆಫ್ರಿಕಾ
South Africa vs West Indies: ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಅಂತ್ಯಗೊಂಡಿದೆ. ಈ ಸರಣಿಯ ಮೊದಲ ಪಂದ್ಯವು ಡ್ರಾನಲ್ಲಿ ಕೊನೆಗೊಂಡಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಭೇರಿ ಬಾರಿಸಿದೆ. ಈ ಮೂಲಕ 1-0 ಅಂತರದಿಂದ ಸರಣಿ ಗೆಲ್ಲುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.
1 / 5
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ ತಂಡ 1-0 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿತ್ತು.
2 / 5
ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು 40 ರನ್ಗಳಿಂದ ಮಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. ಈ ಸರಣಿ ಜಯದೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ತಂಡ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಅದು ಸಹ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ವಿಶ್ವ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.
3 / 5
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಬಾರಿ ಸರಣಿಗಳನ್ನು ಗೆದ್ದ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ 2002 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಸೋತಿಲ್ಲ. ಅಂದರೆ ಕಳೆದ 22 ವರ್ಷಗಳಲ್ಲಿ ವಿಂಡೀಸ್ ವಿರುದ್ಧ ಟೀಮ್ ಇಂಡಿಯಾ ಸತತವಾಗಿ 9 ಸರಣಿಗಳನ್ನು ಗೆದ್ದುಕೊಂಡಿದೆ. ಈ ಮೂಲಕ ವಿಶ್ವ ದಾಖಲೆ ನಿರ್ಮಿಸಿತ್ತು.
4 / 5
ಇನ್ನು ಆಸ್ಟ್ರೇಲಿಯಾ ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಸತತ ಸರಣಿಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು. ಆಸೀಸ್ ಪಡೆ 2000 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಸತತವಾಗಿ 9 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ.
5 / 5
ಇದೀಗ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಸೌತ್ ಆಫ್ರಿಕಾ ಪಡೆ ಯಶಸ್ವಿಯಾಗಿದೆ. 1998 ರಿಂದ ವಿಂಡೀಸ್ ವಿರುದ್ಧ ಪಾರುಪತ್ಯ ಮೆರೆಯುತ್ತಾ ಬಂದಿರುವ ಸೌತ್ ಆಫ್ರಿಕಾ ತಂಡವು ಇದೀಗ 10ನೇ ಬಾರಿ ಸರಣಿ ಗೆದ್ದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ 10 ಸರಣಿಗಳನ್ನು ತಂಡವೆಂಬ ವಿಶ್ವ ದಾಖಲೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಂಡಿದೆ.
Published On - 1:59 pm, Sun, 18 August 24