- Kannada News Photo gallery Cricket photos South africa captain changes all 3 odi match against india
ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳಲ್ಲಿ 3 ನಾಯಕರನ್ನು ಕಣಕ್ಕಿಳಿಸಿದ ಸೌತ್ ಆಫ್ರಿಕಾ..!
India vs South Africa: ಒಂದು ವರ್ಷದಲ್ಲಿ ಟೀಮ್ ಇಂಡಿಯಾ 8 ನಾಯಕರುಗಳನ್ನು ಕಣಕ್ಕಿಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿತ್ತು. ಆದರೀಗ ಸೌತ್ ಆಫ್ರಿಕಾ ಒಂದೇ ಸರಣಿಯಲ್ಲಿ ಮೂವರು ನಾಯಕರನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ.
Updated on: Oct 11, 2022 | 7:24 PM

ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾ 8 ನಾಯಕರುಗಳನ್ನು ಕಣಕ್ಕಿಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿತ್ತು. ಆದರೀಗ ಸೌತ್ ಆಫ್ರಿಕಾ ಒಂದೇ ಸರಣಿಯಲ್ಲಿ ಮೂವರು ನಾಯಕರನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ.

ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತೆಂಬಾ ಬವುಮಾ ಕಾಣಿಸಿಕೊಂಡಿದ್ದರು. ಆದರೆ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಬವುವಾ ಅನಾರೋಗ್ಯದ ಕಾರಣ ವಿಶ್ರಾಂತಿ ಪಡೆದಿದ್ದಾರೆ ಎಂದು ಟೀಮ್ ಮ್ಯಾನೇಜ್ಮೆಂಟ್ ತಿಳಿಸಿತ್ತು.

ಹೀಗಾಗಿ 2ನೇ ಏಕದಿನ ಪಂದ್ಯದಲ್ಲಿ ಉಪನಾಯಕ ಕೇಶವ್ ಮಹಾರಾಜ್ ತಂಡವನ್ನು ಮುನ್ನಡೆಸಿದ್ದರು. ಆದರೆ ದ್ವಿತೀಯ ಏಕದಿನ ಪಂದ್ಯದ ಬಳಿಕ ಕೇಶವ್ ಮಹಾರಾಜ್ ಕೂಡ ವಿಶ್ರಾಂತಿ ಪಡೆದಿದ್ದಾರೆ.

ಹಾಗಾಗಿ ಮೂರನೇ ಏಕದಿನ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ನಾಯಕನಾಗಿ ಕಾಣಿಸಿಕೊಂಡರು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಸೌತ್ ಆಫ್ರಿಕಾ ಮೂವರು ನಾಯಕರುಗಳನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ.

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಈ ಸರಣಿಯಲ್ಲಿ ಕಳಪೆ ಫಾರ್ಮ್ನಲ್ಲಿರುವ ತೆಂಬಾ ಬವುಮಾ ನಾಯಕತ್ವದಲ್ಲಿ ಸೌತ್ ಆಫ್ರಿಕಾ ಮೊದಲ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಎರಡೂ ಪಂದ್ಯಗಳಲ್ಲೂ ಹೀನಾಯವಾಗಿ ಸೋತಿರುವುದು ವಿಶೇಷ.




