ಟೀಮ್ ಇಂಡಿಯಾದ ಸರ್ವಶ್ರೇಷ್ಠ ದಾಖಲೆಯನ್ನು ಸರಿಗಟ್ಟಿದ ಸೌತ್ ಆಫ್ರಿಕಾ

|

Updated on: Jan 08, 2025 | 8:53 AM

WTC 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ ಭಾರತ ತಂಡದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸತತ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯೊಂದು ಟೀಮ್ ಇಂಡಿಯಾ ಹೆಸರಿನಲ್ಲಿತ್ತು. ಈ ವಿಶ್ವ ದಾಖಲೆಯನ್ನು ಇದೀಗ ಸೌತ್ ಆಫ್ರಿಕಾ ತಂಡ ಸರಿಗಟ್ಟಿದೆ. ಅದು ಕೂಡ ಪಾಕಿಸ್ತಾನ್ ತಂಡವನ್ನು 2-0 ಅಂತರದಿಂದ ಬಗ್ಗು ಬಡಿಯುವ ಮೂಲಕ ಎಂಬುದು ವಿಶೇಷ.

2 / 5
2019-2021ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಭಾರತ ತಂಡವು ಸತತ 7 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ WTC ನಲ್ಲಿ ಸತತವಾಗಿ ಅತ್ಯಧಿಕ ಪಂಧ್ಯಗಳನ್ನು ಗೆದ್ದ ತಂಡವೆಂಬ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿತ್ತು.

3 / 5
ಇದೀಗ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಆಫ್ರಿಕನ್ನರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿಕೊಂಡಿದೆ. ಇದರ ಜೊತೆಗೆ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ.

4 / 5
ಅಂದರೆ 2023-2025ರ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವು ಸತತವಾಗಿ 7 ಪಂದ್ಯಗಳಲ್ಲಿ ವಿಜಯ ಸಾಧಿಸಿದೆ. ಕಳೆದ ವರ್ಷ ಆಗಸ್ಟ್​​ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಶುರುವಾದ ಈ ಗೆಲುವಿನ ನಾಗಾಲೋಟ ಇದೀಗ ಪಾಕಿಸ್ತಾನ್ ವಿರುದ್ಧದ ಜಯದೊಂದಿಗೆ ಅಂತ್ಯಗೊಂಡಿದೆ.

5 / 5
ಇನ್ನು ಜೂನ್ 11 ರಿಂದ ಶುರುವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದರೆ, ಟೀಮ್ ಇಂಡಿಯಾದ ಸರ್ವಶ್ರೇಷ್ಠ ದಾಖಲೆಯನ್ನು ಮುರಿದು WTC ನಲ್ಲಿ ಸತತ 8 ಟೆಸ್ಟ್ ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಸೌತ್ ಆಫ್ರಿಕಾ ತನ್ನದಾಗಿಸಿಕೊಳ್ಳಲಿದೆ.

Published On - 8:53 am, Wed, 8 January 25