AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

179 ರನ್, 425 ರನ್​ಗೆ ಡಿಕ್ಲೇರ್..! ತೆಂಬಾ ಬವುಮಾ ಆಟಕ್ಕೆ ತಣ್ಣಗಾದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾದ ನಾಯಕ ತೆಂಬಾ ಬವುಮಾ ಐತಿಹಾಸಿಕ ಶತಕ ಸಿಡಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. 40ಕ್ಕೆ 4 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗಿಳಿದ ಬವುಮಾ, 179 ರನ್‌ಗಳ ಅಮೂಲ್ಯ ಇನ್ನಿಂಗ್ಸ್ ಆಡುವ ಮೂಲಕ ಹಲವು ದಾಖಲೆಗಳನ್ನು ಮುರಿದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ ಅತ್ಯಂತ ಹಿರಿಯ ನಾಯಕ ಎಂಬ ಖ್ಯಾತಿಗೆ ಪಾತ್ರರಾದರು.

ಪೃಥ್ವಿಶಂಕರ
|

Updated on: Oct 20, 2026 | 9:34 PM

Share
ಗ್ಕೆಬರ್ಹಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಪರ ತಂಡದ ನಾಯಕ ತೆಂಬಾ ಬವುಮಾ ಐತಿಹಾಸಿಕ ಶತಕ ಸಿಡಿಸುವ ಮೂಲಕ ತಂಡವನ್ನು ಭದ್ರ ಸ್ಥಿತಿಯತ್ತ ಕೊಂಡೊಯ್ದಿದ್ದಾರೆ(PC-PTI).

1 / 6
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 40 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಸ್ಟ್ರೇಲಿಯಾದ ವೇಗಿ ಸ್ಕಾಟ್ ಬೋಲಂಡ್ ದಕ್ಷಿಣ ಆಫ್ರಿಕಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸಿ ತಂಡಕ್ಕೆ ದೊಡ್ಡ ಹೊಡೆತ ನೀಡಿದ್ದರು. ಈ ವೇಳೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಬವುಮಾ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು(PC-PTI).

2 / 6
ರಯಾನ್ ರಿಕೆಲ್ಟನ್ ಜೊತೆ 52 ರನ್‌ಗಳ ಜೊತೆಯಾಟವಾಡಿದ ಬವುಮಾ, ನಂತರ ಮಾರ್ಕೊ ಯಾನ್ಸನ್ ಜೊತೆಗೂಡಿ 132 ರನ್‌ಗಳ ಮಹತ್ವದ ಜೊತೆಯಾಟ ನೀಡಿದರು. ಹಾಗೆಯೇ ತಮ್ಮ ಶತಕವನ್ನು ಪೂರೈಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಬವುಮಾ ಬಾರಿಸಿದ ಇದು ಐದನೇ ಶತಕವಾಗಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ(PC-PTI).

3 / 6
ಬವುಮಾ ಪಂದ್ಯ ಆರಂಭವಾದಾಗ 36 ವರ್ಷ 154 ದಿನ ವಯಸ್ಸಿನವರಾಗಿದ್ದರು. ಈ ಹಿಂದೆ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ದಾಖಲೆಯನ್ನು ಅವರು ಹಿಂದಿಕ್ಕಿದ್ದಾರೆ. ರೋಹಿತ್ 2023ರ ಫೆಬ್ರವರಿ 9ರಂದು ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 35 ವರ್ಷ 285 ದಿನಗಳ ವಯಸ್ಸಿನಲ್ಲಿ ಶತಕ ಸಿಡಿಸಿದ್ದರು(PC-PTI).

4 / 6
ಇದರ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ದಕ್ಷಿಣ ಆಫ್ರಿಕಾದ ನಾಲ್ಕನೇ ನಾಯಕ ಎಂಬ ದಾಖಲೆಯನ್ನೂ ಬವುಮಾ ನಿರ್ಮಿಸಿದ್ದಾರೆ. ಈ ಹಿಂದೆ ಈ ಸಾಧನೆ ಮಾಡಿದ್ದ ದಕ್ಷಿಣ ಆಫ್ರಿಕಾದ ದಿಗ್ಗಜ ನಾಯಕರಾದ ಗ್ರೇಮ್ ಸ್ಮಿತ್, ಜಾಕ್ ಕಾಲಿಸ್ ಮತ್ತು ಫಾಫ್ ಡು ಪ್ಲೆಸಿಸ್ ಅವರ ಸಾಲಿಗೆ ಇದೀಗ ಬವುಮಾ ಸೇರ್ಪಡೆಯಾಗಿದ್ದಾರೆ(PC-PTI).

5 / 6
ಅಂತಿಮವಾಗಿ ಬವುಮಾ ಈ ಪಂದ್ಯದಲ್ಲಿ 334 ಎಸೆತಗಳನ್ನು ಎದುರಿಸಿ 18 ಬೌಂಡರಿ ಸಹಿತ 179 ರನ್​ಗಳ ಇನ್ನಿಂಗ್ಸ್ ಆಡಿದರು. ಬವುಮಾ ಜೊತೆಗೆ ಮಾರ್ಕೋ ಯಾನ್ಸನ್ 85 ರನ್ ಬಾರಿಸಿದರೆ,  ಸೈಮನ್ ಹಾರ್ಮರ್ 82 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ ತಂಡವನ್ನು 425 ರನ್​ಗಳಿಗೆ ಕೊಂಡೊಯ್ದಿದ್ದಾರೆ(PC-PTI).

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ

ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ

ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!

ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ

ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!

ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!

ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ

ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953

ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್