AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆಯಾಟ… 378 ರನ್​​ಗಳೊಂದಿಗೆ ಇತಿಹಾಸ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್​ಕೆ

Matthew Breetzke Records: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲೆರಡು ಪಂದ್ಯಗಳ ಮೂಲಕ 200+ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಝ್​ಕೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯೊಂದಿಗೆ ಮತ್ತೊಂದು ಭರ್ಜರಿ ವರ್ಲ್ಡ್​ ರೆಕಾರ್ಡ್​ ಬರೆಯುವಲ್ಲಿ ಸೌತ್ ಆಫ್ರಿಕಾದ ಯುವ ದಾಂಡಿಗ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 23, 2025 | 8:10 AM

Share
54 ವರ್ಷಗಳ ಏಕದಿನ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಸೌತ್ ಆಫ್ರಿಕಾದ 26 ವರ್ಷದ ಯುವ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ (Matthew Breetzke). ಅದು ಸಹ ಬ್ಯಾಕ್ ಟು ಬ್ಯಾಕ್ 50+ ಸ್ಕೋರ್​ಗಳಿಸುವ ಮೂಲಕ ಎಂಬುದು ವಿಶೇಷ. ಮ್ಯಾಥ್ಯೂ ಬ್ರೀಟ್ಝ್​ಕೆ ನಿರ್ಮಿಸುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ಮೆಕೆನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ಬ್ರೀಟ್ಝ್​ಕೆ 78 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 88 ರನ್​ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಮ್ಯಾಥ್ಯೂ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಮೊದಲ 4 ಪಂದ್ಯಗಳಲ್ಲಿ ಸತತವಾಗಿ 50+ ಸ್ಕೋರ್​ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಹಾಗೆಯೇ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಮೊದಲ 4 ಪಂದ್ಯಗಳಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಝ್​ಕೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಅವರ ಹೆಸರಿನಲ್ಲಿತ್ತು. 

3 / 5
2016 ರಲ್ಲಿ ಸೌತ್ ಆಫ್ರಿಕಾ ಪರ ಏಕದಿನ ಇನಿಂಗ್ಸ್ ಆರಂಭಿಸಿದ್ದ ಟೆಂಬಾ ಬವುಮಾ ಮೊದಲ ನಾಲ್ಕು ಪಂದ್ಯಗಳ ಮೂಲಕ ಒಟ್ಟು 280 ರನ್ ಕಲೆಹಾಕಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಮೊದಲ 4 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಮ್ಯಾಥ್ಯೂ ಬ್ರೀಟ್ಝ್​ಕೆ ಯಶಸ್ವಿಯಾಗಿದ್ದಾರೆ.

4 / 5
ಈವರೆಗೆ 4 ಏಕದಿನ ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಮ್ಯಾಥ್ಯೂ ಬ್ರೀಟ್ಝ್​ಕೆ 3 ಅರ್ಧಶತಕ ಹಾಗೂ 1 ಶತಕದೊಂದಿಗೆ ಒಟ್ಟು 378 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಪಂದ್ಯಗಳಲ್ಲಿ 300+ ರನ್​ಗಳ ಗಡಿದಾಟಿದ ವಿಶ್ವದ ಏಕೈಕ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಝ್​ಕೆಮ್ಯಾಥ್ಯೂ ಬ್ರೀಟ್ಝ್​ಕೆ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:08 am, Sat, 23 August 25

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್

ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?

ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ