AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 290 ರನ್​ಗಳು… ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್​ಕೆ

Matthew Breetzke Records: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲೆರಡು ಪಂದ್ಯಗಳ ಮೂಲಕ 200+ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಝ್​ಕೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯೊಂದಿಗೆ ಮತ್ತೊಂದು ಭರ್ಜರಿ ರೆಕಾರ್ಡ್ ಬರೆಯುವಲ್ಲಿ ಸೌತ್ ಆಫ್ರಿಕಾದ ಯುವ ದಾಂಡಿಗ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 21, 2025 | 8:00 AM

Share
ಏಕದಿನ ಕ್ರಿಕೆಟ್​ನ ಪಾದಾರ್ಪಣೆ ಪಂದ್ಯದಲ್ಲೇ 150 ರನ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದ ಸೌತ್ ಆಫ್ರಿಕಾದ ಯುವ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ ( Matthew Breetzke) ಇದೀಗ ಮತ್ತೊಂದು ವರ್ಲ್ಡ್​ ರೆಕಾರ್ಡ್​ಗೆ ಕೊರೊಳೊಡ್ಡಿದ್ದಾರೆ. ಅದು ಕೂಡ 29 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಕೈರ್ನ್ಸ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಬ್ರೀಟ್ಝ್​ಕೆ 56 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 57 ರನ್ ಬಾರಿಸಿದ್ದರು. ಈ ಐವತ್ತೇಳು ರನ್​ಗಳೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಬ್ರೀಟ್ಝ್​ಕೆ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 / 5
ಅಂದರೆ ಏಕದಿನ ಕ್ರಿಕೆಟ್​ನ ಮೊದಲ ಮೂರು ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮ್ಯಾಥ್ಯೂ ಬ್ರೀಟ್ಝ್​ಕೆ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಇಂಗ್ಲೆಂಡ್​ನ ಮಾಜಿ ಆರಂಭಿಕ ದಾಂಡಿಗ ನಿಕ್ ನೈಟ್ ಅವರ ಹೆಸರಿನಲ್ಲಿತ್ತು. 

3 / 5
1996 ರಲ್ಲಿ ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ನೈಕ್ ನೈಟ್ ಮೊದಲ ಮೂರು ಇನಿಂಗ್ಸ್​ಗಳ ಮೂಲಕ ಬರೋಬ್ಬರಿ 264 ರನ್​ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಸೌತ್ ಆಫ್ರಿಕಾದ ಟೆಂಬಾ ಬವುಮಾ ಮೊದಲ ಮೂರು ಇನಿಂಗ್ಸ್​ಗಳಿಂದ 259 ರನ್ ಬಾರಿಸಿ ಈ ದಾಖಲೆಯ ಸನಿಹಕ್ಕೆ ತಲುಪಿದ್ದರು.

4 / 5
ಇದೀಗ 29 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಮ್ಯಾಥ್ಯೂ ಬ್ರೀಟ್ಝ್​ಕೆ ಯಶಸ್ವಿಯಾಗಿದ್ದಾರೆ. ಅದು ಕೂಡ ಮೂರು ಇನಿಂಗ್ಸ್​ಗಳಲ್ಲಿ ಬರೋಬ್ಬರಿ 290 ರನ್​ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಈವರೆಗೆ ಮೂರು ಏಕದಿನ ಪಂದ್ಯಗಳನ್ನಾಡಿರುವ ಬ್ರೀಟ್ಝ್​ಕೆ 1 ಶತಕ ಹಾಗೂ 2 ಅರ್ಧಶತಕಗಳೊಂದಿಗೆ 290 ರನ್​ಗಳಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಮೂರು ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ