Steve Stolk: ಒಂದೇ ಓವರ್​ನಲ್ಲಿ 5 ಭರ್ಜರಿ ಸಿಕ್ಸ್​: ಸ್ಟೀವ್ ಅಬ್ಬರಕ್ಕೆ ಪಂತ್ ದಾಖಲೆ ಉಡೀಸ್..!

| Updated By: ಝಾಹಿರ್ ಯೂಸುಫ್

Updated on: Jan 28, 2024 | 2:03 PM

Steve Stolk: ಸೌತ್ ಆಫ್ರಿಕಾ ಅಂಡರ್ 19 ತಂಡದ ಯುವ ಆರಂಭಿಕ ಆಟಗಾರ ಸ್ಟೀವ್ ಸ್ಟೋಕ್ಸ್ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ 8 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂಡರ್-19 ವಿಶ್ವಕಪ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಸೌತ್ ಆಫ್ರಿಕಾದ ಯುವ ದಾಂಡಿಗ ಸ್ಟೀವ್ ಸ್ಟೋಕ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ 7 ವರ್ಷಗಳ ಹಿಂದೆ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಸ್ಕಾಟ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸ್ಟೀವ್ ಸ್ಟೋಕ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ಸ್ಟೋಕ್ ಖಾಸಿಂ ಖಾನ್ ಎಸೆದ 3ನೇ ಓವರ್​ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸಿದ್ದರು. ಅಲ್ಲದೆ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಕಿರಿಯರ ವಿಶ್ವಕಪ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಹೆಸರಿನಲ್ಲಿತ್ತು. 2016ರ ಅಂಡರ್-19 ವಿಶ್ವಕಪ್​ನಲ್ಲಿ ನೇಪಾಳ ವಿರುದ್ಧ ಪಂತ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಟೀವ್ ಸ್ಟೋಕ್ ಅಳಿಸಿ ಹಾಕಿದ್ದಾರೆ.

4 / 5
ಸ್ಕಾಟ್ಲೆಂಡ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಸ್ಟೀವ್ ಸ್ಟೋಕ್ ಅಂಡರ್-19 ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ 50 ಓವರ್​ಗಳಲ್ಲಿ 269 ರನ್​ ಕಲೆಹಾಕಿತು. 270 ರನ್​ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಸ್ಟೀವ್ ಸ್ಟೋಕ್ 37 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 86 ರನ್ ಚಚ್ಚಿದ್ದರು. ಈ ಭರ್ಜರಿ ಅರ್ಧಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡವು 27 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 273 ರನ್​ ಬಾರಿಸಿ ಭರ್ಜರಿ ಜಯ ಸಾಧಿಸಿತು.