AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಸ್ಪೇನ್

23 ವರ್ಷಗಳ ಹಿಂದೆ ಬಲಿಷ್ಠ ಆಸ್ಟ್ರೇಲಿಯಾ ತಂಡ ನಿರ್ಮಿಸಿದ್ದ ಸಾರ್ವಕಾಲಿಕ ವಿಶ್ವ ದಾಖಲೆ ಧೂಳೀಪಟವಾಗಿದೆ. ಹೀಗೆ ವಿಶ್ವ ದಾಖಲೆಯನ್ನು ಧೂಳೀಪಟ ಮಾಡಿರುವ ತಂಡ ಸ್ಪೇನ್. ಯುರೋಪ್​ನಲ್ಲಿ ಕಣಕ್ಕಿಳಿಯುತ್ತಿರುವ ಸ್ಪೇನ್ ಪಡೆ ಇದೀಗ 2003 ರಲ್ಲಿ ರಿಕಿ ಪಾಟಿಂಗ್ ನೇತೃತ್ವದ  ಆಸ್ಟ್ರೇಲಿಯಾ ತಂಡ ನಿರ್ಮಿಸಿದ್ದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಯಶಸ್ವಿಯಾಗಿದೆ.

ಝಾಹಿರ್ ಯೂಸುಫ್
|

Updated on: Aug 17, 2026 | 2:10 PM

Share
ಐಸಿಸಿ ಟಿ20 ವಿಶ್ವಕಪ್​ನ ಯುರೋಪ್ ಸಬ್-ರೀಜನಲ್ ಕ್ವಾಲಿಫೈಯರ್ ಪಂದ್ಯದಲ್ಲಿ ಫಿನ್‌ಲ್ಯಾಂಡ್ ವಿರುದ್ಧ ಸ್ಪೇನ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಜಯದೊಂದಿಗೆ ಸ್ಪೇನ್ ಪಡೆ ವಿಶ್ವ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ 23 ವರ್ಷಗಳ ಹಿಂದೆ ಆಸ್ಟ್ರೇಲಿಯಾ ನಿರ್ಮಿಸಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. (PC: GettyImages)

1 / 5
ಫಿನ್​ಲ್ಯಾಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಸ್ಪೇನ್, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. (PC: Cricket Spain)

2 / 5
ರಿಕಿ ಪಾಂಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡವು 2003ರಲ್ಲಿ (ಜನವರಿಯಿಂದ ಮೇ ಅವಧಿಯಲ್ಲಿ) ಸತತ 20 ಅಂತರರಾಷ್ಟ್ರೀಯ ಪಂದ್ಯಗಳನ್ನು (17 ಏಕದಿನ ಮತ್ತು 3 ಟೆಸ್ಟ್ ಪಂದ್ಯಗಳು) ಗೆದ್ದುಕೊಂಡಿತ್ತು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯ ಗೆದ್ದ ವಿಶ್ವ ದಾಖಲೆ ನಿರ್ಮಿಸಿತ್ತು. (PC: GettyImages)

3 / 5
ಇದೀಗ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸ್ಪೇನ್ ಪಡೆ ಅಳಿಸಿ ಹಾಕಿದ್ದಾರೆ. ಫೆಬ್ರವರಿ 2023 ರಲ್ಲಿ ಶುರುವಾದ ಸ್ಪೇನ್ ತಂಡದ ಗೆಲುವಿನ ನಾಗಾಲೋಟ 2026 ರಲ್ಲೂ ಮುಂದುವರೆದಿದೆ. ಈ ಮೂಲಕ ಸತತ 21 ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. (PC: Cricket Spain)

4 / 5
ಇದಕ್ಕೂ ಮುನ್ನ ಸ್ಪೇನ್ ತಂಡ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 14 ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸತತ 21 ಗೆಲುವುಗಳೊಂದಿಗೆ ಸ್ಪೇನ್ ಪಡೆ ವಿಶ್ವ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದೆ. (PC: Cricket Spain)

5 / 5
Follow Us
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ

4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!

ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ

ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ

ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್

ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ

ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ
ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ