
ಐಸಿಸಿ ಟಿ20 ವಿಶ್ವಕಪ್ನ ಯುರೋಪ್ ಸಬ್-ರೀಜನಲ್ ಕ್ವಾಲಿಫೈಯರ್ ಪಂದ್ಯದಲ್ಲಿ ಫಿನ್‌ಲ್ಯಾಂಡ್ ವಿರುದ್ಧ ಸ್ಪೇನ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಜಯದೊಂದಿಗೆ ಸ್ಪೇನ್ ಪಡೆ ವಿಶ್ವ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ 23 ವರ್ಷಗಳ ಹಿಂದೆ ಆಸ್ಟ್ರೇಲಿಯಾ ನಿರ್ಮಿಸಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. (PC: GettyImages)

ಫಿನ್‌ಲ್ಯಾಂಡ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿದ ಸ್ಪೇನ್, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. (PC: Cricket Spain)

ರಿಕಿ ಪಾಂಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡವು 2003ರಲ್ಲಿ (ಜನವರಿಯಿಂದ ಮೇ ಅವಧಿಯಲ್ಲಿ) ಸತತ 20 ಅಂತರರಾಷ್ಟ್ರೀಯ ಪಂದ್ಯಗಳನ್ನು (17 ಏಕದಿನ ಮತ್ತು 3 ಟೆಸ್ಟ್ ಪಂದ್ಯಗಳು) ಗೆದ್ದುಕೊಂಡಿತ್ತು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯ ಗೆದ್ದ ವಿಶ್ವ ದಾಖಲೆ ನಿರ್ಮಿಸಿತ್ತು. (PC: GettyImages)

ಇದೀಗ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸ್ಪೇನ್ ಪಡೆ ಅಳಿಸಿ ಹಾಕಿದ್ದಾರೆ. ಫೆಬ್ರವರಿ 2023 ರಲ್ಲಿ ಶುರುವಾದ ಸ್ಪೇನ್ ತಂಡದ ಗೆಲುವಿನ ನಾಗಾಲೋಟ 2026 ರಲ್ಲೂ ಮುಂದುವರೆದಿದೆ. ಈ ಮೂಲಕ ಸತತ 21 ಮ್ಯಾಚ್ಗಳಲ್ಲಿ ಜಯ ಸಾಧಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. (PC: Cricket Spain)

ಇದಕ್ಕೂ ಮುನ್ನ ಸ್ಪೇನ್ ತಂಡ ಟಿ20 ಕ್ರಿಕೆಟ್ನಲ್ಲಿ ಸತತವಾಗಿ 14 ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸತತ 21 ಗೆಲುವುಗಳೊಂದಿಗೆ ಸ್ಪೇನ್ ಪಡೆ ವಿಶ್ವ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದೆ. (PC: Cricket Spain)