ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್
T20I World Record: ಟಿ20 ಕ್ರಿಕೆಟ್ನ ವಿಶ್ವ ದಾಖಲೆ ಪಟ್ಟಿಗೆ ಸ್ಪೇನ್ ಕೂಡ ಎಂಟ್ರಿ ಕೊಟ್ಟಿದೆ. ಅದು ಸಹ ಸತತ ಗೆಲುವುಗಳ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ಹೊಸ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ನಿರ್ಮಿಸಿದೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸ್ಪೇನ್ ಪಡೆ ಯಶಸ್ವಿಯಾಗಿದೆ.
Updated on: Jan 05, 2026 | 7:02 AM

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಪೇನ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಹಿಂದೆಂದೂ ಕಂಡರಿಯದ ವರ್ಲ್ಡ್ ರೆಕಾರ್ಡ್ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ತನ್ನದಾಗಿಸಿಕೊಂಡಿದೆ.

ಲಾ ಮಂಗಾ ಕ್ಲಬ್ ಮೈದಾನದಲ್ಲಿ ನಡೆದ ಕ್ರೊಯೇಷಿಯ ವಿರುದ್ಧದ ಪಂದ್ಯದಲ್ಲಿ ಸ್ಪೇನ್ ತಂಡವು 8 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಸ್ಪೇನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತವಾಗಿ 20 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ಉಗಾಂಡ ತಂಡದ ಹೆಸರಿನಲ್ಲಿತ್ತು. 2024 ರಿಂದ 2025 ರವರೆಗೆ ಉಗಾಂಡ ತಂಡವು ಸತತವಾಗಿ 17 ಮ್ಯಾಚ್ಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.

ಇದೀಗ ಕ್ರೊಯೇಷಿಯಾ ವಿರುದ್ಧದ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ಗೆಲ್ಲುವ ಮೂಲಕ ಸ್ಪೇನ್ ತಂಡವು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ 20 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

ಇನ್ನು ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ 12 ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸತತ ಗೆಲುವಿನ ದಾಖಲೆ ಪಟ್ಟಿಯಲ್ಲಿ ಭಾರತ ತಂಡವು 5ನೇ ಸ್ಥಾನದಲ್ಲಿರುವುದು ವಿಶೇಷ. ಒಟ್ಟಿನಲ್ಲಿ ವಿಶ್ವ ಕ್ರಿಕೆಟ್ಗೆ ಅಂಬೆಗಾಲಿಡುತ್ತಿರುವ ಸ್ಪೇನ್ ತಂಡವು ಇದೀಗ ಸತತ ಗೆಲುವುಗಳ ಮೂಲಕ ಇಡೀ ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದು ವಿಶೇಷ.
