ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್

Updated on: Jan 05, 2026 | 7:02 AM

T20I World Record: ಟಿ20 ಕ್ರಿಕೆಟ್​ನ ವಿಶ್ವ ದಾಖಲೆ ಪಟ್ಟಿಗೆ ಸ್ಪೇನ್ ಕೂಡ ಎಂಟ್ರಿ ಕೊಟ್ಟಿದೆ. ಅದು ಸಹ ಸತತ ಗೆಲುವುಗಳ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ಹೊಸ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ನಿರ್ಮಿಸಿದೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸ್ಪೇನ್ ಪಡೆ ಯಶಸ್ವಿಯಾಗಿದೆ.

1 / 5
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸ್ಪೇನ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಹಿಂದೆಂದೂ ಕಂಡರಿಯದ ವರ್ಲ್ಡ್​ ರೆಕಾರ್ಡ್​ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ತನ್ನದಾಗಿಸಿಕೊಂಡಿದೆ.

2 / 5
ಲಾ ಮಂಗಾ ಕ್ಲಬ್ ಮೈದಾನದಲ್ಲಿ ನಡೆದ ಕ್ರೊಯೇಷಿಯ ವಿರುದ್ಧದ ಪಂದ್ಯದಲ್ಲಿ ಸ್ಪೇನ್ ತಂಡವು 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಸ್ಪೇನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸತತವಾಗಿ 20 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

3 / 5
ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​​ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ಉಗಾಂಡ ತಂಡದ ಹೆಸರಿನಲ್ಲಿತ್ತು. 2024 ರಿಂದ 2025 ರವರೆಗೆ ಉಗಾಂಡ ತಂಡವು ಸತತವಾಗಿ 17 ಮ್ಯಾಚ್​​ಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.

4 / 5
ಇದೀಗ ಕ್ರೊಯೇಷಿಯಾ ವಿರುದ್ಧದ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ಗೆಲ್ಲುವ ಮೂಲಕ ಸ್ಪೇನ್ ತಂಡವು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ 20 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

5 / 5
ಇನ್ನು ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 12 ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸತತ ಗೆಲುವಿನ ದಾಖಲೆ ಪಟ್ಟಿಯಲ್ಲಿ ಭಾರತ ತಂಡವು 5ನೇ ಸ್ಥಾನದಲ್ಲಿರುವುದು ವಿಶೇಷ. ಒಟ್ಟಿನಲ್ಲಿ ವಿಶ್ವ ಕ್ರಿಕೆಟ್​ಗೆ ಅಂಬೆಗಾಲಿಡುತ್ತಿರುವ ಸ್ಪೇನ್ ತಂಡವು ಇದೀಗ ಸತತ ಗೆಲುವುಗಳ ಮೂಲಕ ಇಡೀ ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದು ವಿಶೇಷ.