AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್

T20I World Record: ಟಿ20 ಕ್ರಿಕೆಟ್​ನ ವಿಶ್ವ ದಾಖಲೆ ಪಟ್ಟಿಗೆ ಸ್ಪೇನ್ ಕೂಡ ಎಂಟ್ರಿ ಕೊಟ್ಟಿದೆ. ಅದು ಸಹ ಸತತ ಗೆಲುವುಗಳ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ಹೊಸ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ನಿರ್ಮಿಸಿದೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸ್ಪೇನ್ ಪಡೆ ಯಶಸ್ವಿಯಾಗಿದೆ.

TV9 Web
| Edited By: |

Updated on: Aug 27, 2024 | 7:24 AM

Share
ಐಸಿಸಿ ಟಿ20 ವಿಶ್ವಕಪ್​ನ ಯುರೋಪ್ ಕ್ವಾಲಿಫೈಯರ್ ಪಂದ್ಯದಲ್ಲಿ ಗ್ರೀಸ್ ವಿರುದ್ಧ ಸ್ಪೇನ್ ತಂಡವು ಭರ್ಜರಿ ಜಯ ಸಾಧಿಸಿದೆ. ಗುರ್ನಸಿ ರೋವರ್ಸ್ ಅಥ್ಲೆಟಿಕ್ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗ್ರೀಸ್ ತಂಡವು 20 ಓವರ್​ಗಳಲ್ಲಿ 96 ರನ್​ಗಳಿಸಿತು. ಈ ಗುರಿಯನ್ನು 13 ಓವರ್​ಗಳಲ್ಲಿ ಬೆನ್ನತ್ತುವ ಮೂಲಕ ಸ್ಪೇನ್ ತಂಡವು 7 ವಿಕೆಟ್​ಗಳ ಗೆಲುವು ದಾಖಲಿಸಿದೆ.

1 / 5
ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ಸ್ಪೇನ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಮಲೇಷ್ಯಾ ಹಾಗೂ ಬರ್ಮುಡಾ ತಂಡಗಳ ಹೆಸರಿನಲ್ಲಿತ್ತು.

2 / 5
ಮಲೇಷ್ಯಾ ತಂಡವು ಸತತ 13 ಟಿ20 ಪಂದ್ಯಗಳನ್ನು ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇನ್ನು ಬರ್ಮುಡಾ ಕೂಡ ಸತತ 13 ಪಂದ್ಯಗಳ ಮೂಲಕ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಈ ಎರಡು ತಂಡಗಳ ವಿಶ್ವ ದಾಖಲೆ ಮುರಿಯುವಲ್ಲಿ ಸ್ಪೇನ್ ತಂಡ ಯಶಸ್ವಿಯಾಗಿದೆ.

3 / 5
ಗ್ರೀಸ್ ತಂಡವನ್ನು ಬಗ್ಗು ಬಡಿಯುವುದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ಸ್ಪೇನ್ ಪಾಲಾಗಿದೆ. ಸ್ಪೇನ್ ತಂಡವು ಈವರೆಗೆ ಸತತವಾಗಿ 14 ಟಿ20 ಪಂದ್ಯಗಳನ್ನು ಗೆದ್ದುಕೊಂಡಿದ್ದು, ಈ ಗೆಲುವಿನ ನಾಗಾಲೋಟದೊಂದಿಗೆ ಇದೀಗ ಟಿ20 ಕ್ರಿಕೆಟ್​ನಲ್ಲಿ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ.

4 / 5
ಇನ್ನು ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಸತತವಾಗಿ 12 ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸತತ ಗೆಲುವಿನ ದಾಖಲೆ ಪಟ್ಟಿಯಲ್ಲಿ ಭಾರತ ತಂಡವು 5ನೇ ಸ್ಥಾನದಲ್ಲಿರುವುದು ವಿಶೇಷ. ಒಟ್ಟಿನಲ್ಲಿ ವಿಶ್ವ ಕ್ರಿಕೆಟ್​ಗೆ ಅಂಬೆಗಾಲಿಡುತ್ತಿರುವ ಸ್ಪೇನ್ ತಂಡವು ಇದೀಗ ಸತತ ಗೆಲುವುಗಳ ಮೂಲಕ ಇಡೀ ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವುದು ವಿಶೇಷ.

5 / 5
TV9 Web
TV9 Web

TV9 Kannada

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!