AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 17 ಸಿಕ್ಸ್​… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಇಹ್ಸಾನ್

Muhammad Ihsan T20 Records: ಟಿ20 ಅಂತಾರಾಷ್ಟ್ರೀಯ ಇನಿಂಗ್ಸ್​ನಲ್ಲಿ  ಒಂದೇ ಓವರ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಎಸ್ಟೋನಿಯಾದ ಸಾಹಿಲ್ ಚೌಹಾನ್ ಹೆಸರಿನಲ್ಲಿದೆ. ಸಾಹಿಲ್ ಸೈಪ್ರಸ್ ವಿರುದ್ಧದ ಪಂದ್ಯದಲ್ಲಿ 18 ಸಿಕ್ಸ್ ಸಿಡಿಸಿ ಈ ದಾಖಲೆ ಬರೆದಿದ್ದಾರೆ. ಇದೀಗ ಸ್ಪೇನ್​ನ ಮುಹಮ್ಮದ್ ಇಹ್ಸಾನ್ 17 ಸಿಕ್ಸ್ ಬಾರಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 08, 2025 | 11:53 AM

Share
ಟಿ20 ಕ್ರಿಕೆಟ್​ನಲ್ಲಿ ಸ್ಪೇನ್​ನ ಮುಹಮ್ಮದ್ ಇಹ್ಸಾನ್ (Muhammad Ihsan) ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಸ್ಫೋಟಕ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ 2 ಶತಕಗಳನ್ನು ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಇಹ್ಸಾನ್ ತನ್ನದಾಗಿಸಿಕೊಂಡಿದ್ದಾರೆ.

1 / 6
ಮುರ್ಷಿಯಾದಲ್ಲಿ ನಡೆದ ಈ ಪಂದ್ಯದಲ್ಲಿ ಸ್ಪೇನ್ ಹಾಗೂ ಕ್ರೊವೆಷಿಯಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಸ್ಪೇನ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಮುಹಮ್ಮದ್ ಇಹ್ಸಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಮುಹಮ್ಮದ್ ಇಹ್ಸಾನ್ ಶತಕ ಪೂರೈಸಲು ತೆಗೆದುಕೊಂಡಿದ್ದು ಕೇವಲ 41 ಎಸೆತಗಳನ್ನು ಮಾತ್ರ. ಇನ್ನು ಸೆಂಚುರಿ ಬಳಿಕ ಕೂಡ ಸಿಡಿಲಬ್ಬರ ಮುಂದುವರೆಸಿದ ಎಹ್ಸಾನ್ 63 ಎಸೆತಗಳಲ್ಲಿ ಬರೋಬ್ಬರಿ 17 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 160 ಬಾರಿಸಿದರು.

3 / 6
ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ 2 ಶತಕ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಬರೆದಿದ್ದು ಸಮೋವಾ ತಂಡದ ಡೇರಿಯಸ್ ವಿಸ್ಸರ್. 2024 ರಲ್ಲಿ ವನವಾಟು ವಿರುದ್ಧ ಬ್ಯಾಕ್ ಟು ಬ್ಯಾಕ್ 2 ಟಿ20 ಶತಕಗಳನ್ನು ಬಾರಿಸಿದ್ದರು. ಇದೀಗ ಕ್ರೊವೆಷಿಯಾ ವಿರುದ್ಧದ ಸರಣಿಯಲ್ಲಿ ಇಹ್ಸಾನ್ 112 ಹಾಗೂ 160 ರನ್​ಗಳ ಇನಿಂಗ್ಸ್ ಆಡುವ ಮೂಲಕ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 6
ಇನ್ನು ಮುಹಮ್ಮದ್ ಇಹ್ಸಾನ್ ಬಾರಿಸಿದ 160 ರನ್​ಗಳ ನೆರವಿನೊಂದಿಗೆ ಸ್ಪೇನ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 290 ರನ್ ಕಲೆಹಾಕಿತು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ದಾಖಲಾದ 6ನೇ ಗರಿಷ್ಠ ಸ್ಖೋರ್ ಎಂಬುದು ವಿಶೇಷ.

5 / 6
ಇನ್ನು 291 ರನ್​ಗಳ ಗುರಿ ಬೆನ್ನತ್ತಿದ ಕ್ರೊವೆಷಿಯಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 78 ರನ್​ಗಳು ಮಾತ್ರ. ಈ ಮೂಲಕ ಸ್ಪೇನ್ ತಂಡವು 215 ರನ್​ಗಳ ಅಮೋಘ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ

ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್

ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ

ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ

ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ