Team India: ಟೀಮ್ ಇಂಡಿಯಾಗೆ ಸ್ಪೀಡ್​ಸ್ಟರ್ ಎಂಟ್ರಿ

|

Updated on: Sep 29, 2024 | 10:53 AM

Mayank Yadav: ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 4 ಪಂದ್ಯಗಳನ್ನಾಡಿರುವ ಮಯಾಂಕ್ ಯಾದವ್ 73 ಎಸೆತಗಳಲ್ಲಿ ಕೇವಲ 85 ರನ್ ಮಾತ್ರ ನೀಡಿದ್ದಾರೆ. ಅಲ್ಲದೆ 7 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸತತವಾಗಿ 150ರ ಅಸುಪಾಸಿನಲ್ಲಿ ಚೆಂಡೆಸೆಯುವ ಮೂಲಕ ಮಯಾಂಕ್ ಯಾದವ್ ಸಂಚಲನ ಸೃಷ್ಟಿಸಿದ್ದರು.

1 / 6
ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಯುವ ವೇಗಿ ಮಯಾಂಕ್ ಯಾದವ್ (Mayank Yadav) ಕೂಡ ಸ್ಥಾನ ಪಡೆದಿದ್ದಾರೆ. ಐಪಿಎಲ್​ನಲ್ಲಿ ತನ್ನ ವೇಗದ ಬೌಲಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿದ್ದ ಮಯಾಂಕ್​ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಚಾನ್ಸ್ ಸಿಕ್ಕಿದೆ.

2 / 6
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 17 ರಲ್ಲಿ ತನ್ನ ಮಿಂಚಿನ ವೇಗದೊಂದಿಗೆ ಗಮನ ಸೆಳೆದಿದ್ದ ಮಯಾಂಕ್ ಗಾಯದ ಕಾರಣ ಕೆಲ ಕಾಲ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಿರುವ ಯುವ ವೇಗಿಗೆ ಭಾರತದಲ್ಲಿ ಅವಕಾಶ ನೀಡಲಾಗಿದೆ.

3 / 6
ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ಮಯಾಂಕ್ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಚೆಂಡೆಸೆದಿದ್ದರು. ಈ ಮೂಲಕ ಐಪಿಎಲ್ ಸೀಸನ್-17 ರಲ್ಲಿ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ ದಾಖಲೆ ನಿರ್ಮಿಸಿದ್ದರು.

4 / 6
ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಯಾಂಕ್ 155.8 kmph ವೇಗದಲ್ಲಿ ಚೆಂಡೆಸೆದಿದ್ದರು. ಇದಾದ ಬಳಿಕ 156.7 kmph ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದರು. ಈ ವೇಗದ ಅಸ್ತ್ರವೇ ಇದೀಗ ಮಾಯಾಂಕ್​ಗೆ ಭಾರತ ತಂಡದಲ್ಲಿ ಸ್ಥಾನ ಸಿಗುವಂತೆ ಮಾಡಿದೆ.

5 / 6
ಅದರಂತೆ 22 ವರ್ಷದ ಮಯಾಂಕ್ ಯಾದವ್ ಇದೀಗ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದು, ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಪರ ಅತೀ ವೇಗವಾಗಿ ಚೆಂಡೆಸೆದ ದಾಖಲೆ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

6 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.