AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನಿಗೆ ಬಿಗ್ ರಿಲೀಫ್; 3 ವರ್ಷಗಳ ನಿಷೇಧ ತೆರವು..!

KCA Lifts Sreesanth's Ban: ಕೇರಳ ಕ್ರಿಕೆಟ್ ಅಸೋಸಿಯೇಷನ್ ಶ್ರೀಶಾಂತ್ ಮೇಲೆ ಹೇರಿದ್ದ 3 ವರ್ಷಗಳ ನಿಷೇಧವನ್ನು ತೆರವುಗೊಳಿಸಿದೆ. ಸಂಜು ಸ್ಯಾಮ್ಸನ್ ಕುರಿತ ಹಿಂದಿನ ಹೇಳಿಕೆಗಳಿಗಾಗಿ ಶ್ರೀಶಾಂತ್ ಕ್ಷಮೆಯಾಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ಶ್ರೀಶಾಂತ್, ಕೆಸಿಎಲ್ ಸೀಸನ್ 3 ರಲ್ಲಿ ಏರೀಸ್ ಕೊಲ್ಲಂ ಸೈಲರ್ಸ್ ಫ್ರಾಂಚೈಸಿಯ ಸಹ-ಮಾಲೀಕರಾಗಿ ಮುಂದುವರಿಯಲಿದ್ದಾರೆ, ಕ್ರಿಕೆಟ್ ವಲಯದಲ್ಲಿ ಇದು ಒಂದು ದೊಡ್ಡ ಬೆಳವಣಿಗೆ.

ಪೃಥ್ವಿಶಂಕರ
|

Updated on: Jul 01, 2026 | 10:24 PM

Share
ಕೇರಳ ಕ್ರಿಕೆಟ್​ನಿಂದ ಮೂರು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್​ಗೆ ಸುಮಾರು ಒಂದು ವರ್ಷದ ನಂತರ ಬಿಗ್ ರಿಲೀಫ್ ಸಿಕ್ಕಿದೆ. ಕೇರಳ ಕ್ರಿಕೆಟ್ ಅಸೋಸಿಯೇಷನ್​ನ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಕ್ಷಮೆಯಾಚಿಸಿದ ಬಳಿಕ ಅವರ ವಿರುದ್ಧ ಹೇರಿದ್ದ ನಿಷೇಧದ ಶಿಕ್ಷೆಯನ್ನು ತೆರವುಗೊಳಿಸಲಾಗಿದೆ.

1 / 5
ವಾಸ್ತವವಾಗಿ ಕಳೆದ ವರ್ಷ ಸಂಜು ಸ್ಯಾಮ್ಸನ್ ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಲ್ಲಿ ಆಯ್ಕೆ ಮಾಡದಿರುವುದರ ಬಗ್ಗೆ ಅಸಮಾಧಾನಗೊಂಡಿದ್ದ ಶ್ರೀಶಾಂತ್ ಕೇರಳ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಹೀಗಾಗಿ ಅವರನ್ನು 3 ವರ್ಷಗಳ ಕಾಲ ಕೆರಳ ಕ್ರಿಕೆಟ್​ನಿಂದ ಬ್ಯಾನ್ ಮಾಡಲಾಗಿತ್ತು.

2 / 5
ಇದೀಗ ಶ್ರೀಶಾಂತ್ ಕೆಸಿಎಲ್ ಮುಂದೆ ಕ್ಷಮೆಯಾಚಿಸಿದ್ದು, ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇರಳ ಕ್ರಿಕೆಟ್ ಅಸೋಸಿಯೇಷನ್, ವಿಶೇಷ ಸಾಮಾನ್ಯ ಸಭೆಯಲ್ಲಿ ಶ್ರೀಶಾಂತ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಶ್ರೀಶಾಂತ್, ಕೆಸಿಎ ವಿರುದ್ಧದ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

3 / 5
ನಿಷೇಧ ತೆರವಾದ ಬಳಿಕ ಶ್ರೀಶಾಂತ್, ಕೇರಳ ಕ್ರಿಕೆಟ್ ಲೀಗ್ ಸೀಸನ್ 3 ರಲ್ಲಿ ಏರೀಸ್ ಕೊಲ್ಲಂ ಸೈಲರ್ಸ್ ಫ್ರಾಂಚೈಸಿಯ ಸಹ-ಮಾಲೀಕರಾಗಿ ಮುಂದುವರಿಯಲಿದ್ದಾರೆ. ಕಳೆದ ಕೆಸಿಎಲ್ ಸೀಸನ್‌ಗೂ ಮೊದಲು ಕೆಸಿಎ ಅವರ ಮೇಲೆ ನಿಷೇಧ ಹೇರಿತ್ತು. ಭಾರತದ ಮಾಜಿ ವೇಗದ ಬೌಲರ್ ಶ್ರೀಶಾಂತ್ ದೇಶದ ಮೂರು ಅಂತರರಾಷ್ಟ್ರೀಯ ಸ್ವರೂಪಗಳಲ್ಲಿ ಆಡಿದ್ದು, 27 ಟೆಸ್ಟ್, 53 ಏಕದಿನ ಮತ್ತು 10 ಟಿ20ಪಂದ್ಯಗಳನ್ನು ಆಡಿದ್ದಾರೆ.

4 / 5
ಶ್ರೀಶಾಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ 37.59 ಸರಾಸರಿಯಲ್ಲಿ 87 ವಿಕೆಟ್‌ಗಳನ್ನು ಕಬಳಿಸಿದ್ದರೆ, ಏಕದಿನ ಕ್ರಿಕೆಟ್‌ನಲ್ಲಿ, 33.44 ಸರಾಸರಿಯಲ್ಲಿ 75 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಉಳಿದಂತೆ 10 ಟಿ20 ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಶ್ರೀಶಾಂತ್ ದೇಶೀಯ ಕ್ರಿಕೆಟ್‌ನಲ್ಲಿ 74 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು 213 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಇದಲ್ಲದೆ, ಅವರು 92 ಲಿಸ್ಟ್ ಎ ಪಂದ್ಯಗಳಲ್ಲಿ 124 ವಿಕೆಟ್‌ಗಳು ಮತ್ತು 65 ಟಿ20 ಪಂದ್ಯಗಳಲ್ಲಿ 54 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 

ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ

ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?

ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ

ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ

ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ

ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ

ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?

ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?