AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧ ಸಿಡಿಲಬ್ಬರ… ಐಪಿಎಲ್ ಇತಿಹಾಸ ಬದಲಿಸಿದ SRH

IPL 2026 RCB vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 200 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್​ 55 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2026 | 11:19 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 9ನೇ ಬಾರಿ 200+ ಸ್ಕೋರ್​ಗಳಿಸುವ ಮೂಲಕ. ಅಂದರೆ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 9ನೇ ಬಾರಿ 200+ ಸ್ಕೋರ್​ಗಳಿಸುವ ಮೂಲಕ. ಅಂದರೆ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ. (PC: IPL)Srh (35)

1 / 5
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್​ ಚಚ್ಚಿದರು. ಈ ಮೂಲಕ ಐಪಿಎಲ್​ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ಭರ್ಜರಿ ದಾಖಲೆ ನಿರ್ಮಿಸಿದರು. (PC: IPL)

2 / 5
ಇದಕ್ಕೂ ಮುನ್ನ ಈ ದಾಖಲೆ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ಹೆಸರಿನಲ್ಲಿತ್ತು. ಪಂಜಾಬ್ ಕಿಂಗ್ಸ್ ತಂಡವು 2025 ರಲ್ಲಿ 8 ಬಾರಿ 200+ ಸ್ಕೋರ್​ ಗಳಿಸಿದ್ದರು. ಇನ್ನು ಗುಜರಾತ್ ಟೈಟಾನ್ಸ್ ತಂಡ ಕೂಡ 2025 ರಲ್ಲೇ 8 ಬಾರಿ 200 ಕ್ಕಿಂತ ಹೆಚ್ಚು ರನ್​ ಕಲೆಹಾಕಿದ್ದರು. (PC: IPL)

3 / 5
ಆದರೆ ಈ ಬಾರಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿರುವ ಸನ್​ರೈಸರ್ಸ್ ಹೈದರಾಬಾದ್ ದಾಂಡಿಗರು ಒಟ್ಟು 9 ಬಾರಿ 200+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. (PC: IPL)

4 / 5
ಸನ್​ರೈಸರ್ಸ್ ಹೈದರಾಬಾದ್ ತಂಡವು ಈ ಬಾರಿ ಆರ್​ಸಿಬಿ (201/9 ಮತ್ತು 225/4), ರಾಜಸ್ಥಾನ್ ರಾಯಲ್ಸ್ ವಿರುದ್ಧ (229/5 ಮತ್ತು 216/6)  ಮತ್ತು  ಪಂಜಾಬ್ ಕಿಂಗ್ಸ್ ವಿರುದ್ಧ  (219/6 ಮತ್ತು 235/4) ತಲಾ 2 ಬಾರಿ 200+ ಸ್ಕೋರ್​​ಗಳಿಸಿದೆ. ಹಾಗೆಯೇ ಕೋಲ್ಕತಾ ನೈಟ್ ರೈಡರ್ಸ್ (226/8), ಮುಂಬೈ ಇಂಡಿಯನ್ಸ್ (249/4) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ (242/2) ತಲಾ ಒಂದೊಂದು ಬಾರಿ 200+ ಸ್ಕೋರ್​ ಬಾರಿಸಿದೆ. ಈ ಮೂಲಕ ಐಪಿಎಲ್​ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆಯನ್ನು ಸನ್​ರೈಸರ್ಸ್ ಹೈದರಾಬಾದ್​ ತಂಡ ತನ್ನದಾಗಿಸಿಕೊಂಡಿದೆ. (PC: IPL)

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us