- Kannada News Photo gallery Cricket photos Kannada News | SRH vs RCB Pitch report If RCB win the toss, which should be selected?: How is the Hyderabad pitch
SRH vs RCB: ಆರ್‌ಸಿಬಿ ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳಬೇಕು?: ಹೈದರಾಬಾದ್ ಪಿಚ್ ಹೇಗಿದೆ?
Rajiv Gandhi International Stadium Pitch Report: ಹೆಚ್ಚು ಕಡಿಮೆ ಜೈಪುರದ ಪಿಚ್ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.
Updated on: May 18, 2023 | 9:36 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಹೈದರಾಬಾದ್‌ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಆರ್‌ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ.

ಪ್ಲೇ ಆಫ್ ರೇಸ್ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ. ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್ಆರ್ ತಂಡವನ್ನು ಕೇವಲ 59 ರನ್ಗಳಿಗೆ ಆಲೌಟ್ ಮಾಡಿತ್ತು.

ಹೆಚ್ಚು ಕಡಿಮೆ ಜೈಪುರದ ಪಿಚ್ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.

ಈ ಪಿಚ್ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟ್ ಮಾಡುವ ನಿರ್ಣಯ ತೆಗೆದುಕೊಂಡರೆ ಉತ್ತಮ. ಈ ಮೈದಾನದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್ 10 ಬಾರಿ ಮುಖಾಮುಖಿಯಾಗಿದ್ದು, ಆತಿಥೇಯರು 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪ್ರವಾಸಿ ತಂಡ ಕೇವಲ 2 ಬಾರಿ ಜಯ ಕಂಡಿದೆಯಷ್ಟೆ.

ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 22 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ 12 ಪಂದ್ಯಗಳಲ್ಲಿ ಗೆದ್ದರೆ ಆರ್‌ಸಿಬಿ 9 ಪಂದ್ಯದಲ್ಲಷ್ಟೆ ಜಯ ಸಾಧಿಸಿದೆ.

ಆರ್‌ಸಿಬಿ ಪರ ಬ್ಯಾಟಿಂಗ್ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಹನಿಂದು ಹಸರಂಗ ಪ್ಲೇಯಿಂಗ್ ಇಲೆವೆನ್ಗೆ ಕಮ್ಬ್ಯಾಕ್ ಮಾಡ್ತಾರ ನೋಡಬೇಕು. ಕರ್ಣ್ ಶರ್ಮಾ ಮಾರಕವಾಗಿದ್ದಾರೆ.









