AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RCB: ಆರ್​ಸಿಬಿ ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳಬೇಕು?: ಹೈದರಾಬಾದ್ ಪಿಚ್ ಹೇಗಿದೆ?

Rajiv Gandhi International Stadium Pitch Report: ಹೆಚ್ಚು ಕಡಿಮೆ ಜೈಪುರದ ಪಿಚ್​ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್‌ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.

Vinay Bhat
|

Updated on: May 18, 2023 | 9:36 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

1 / 8
ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ.

2 / 8
ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ. ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು.

3 / 8
ಹೆಚ್ಚು ಕಡಿಮೆ ಜೈಪುರದ ಪಿಚ್​ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್‌ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.

4 / 8
ಈ ಪಿಚ್​ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟ್ ಮಾಡುವ ನಿರ್ಣಯ ತೆಗೆದುಕೊಂಡರೆ ಉತ್ತಮ. ಈ ಮೈದಾನದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್ 10 ಬಾರಿ ಮುಖಾಮುಖಿಯಾಗಿದ್ದು, ಆತಿಥೇಯರು 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪ್ರವಾಸಿ ತಂಡ ಕೇವಲ 2 ಬಾರಿ ಜಯ ಕಂಡಿದೆಯಷ್ಟೆ.

5 / 8
ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 22 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ 12 ಪಂದ್ಯಗಳಲ್ಲಿ ಗೆದ್ದರೆ ಆರ್​ಸಿಬಿ 9 ಪಂದ್ಯದಲ್ಲಷ್ಟೆ ಜಯ ಸಾಧಿಸಿದೆ.

6 / 8
ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

7 / 8
ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಹನಿಂದು ಹಸರಂಗ ಪ್ಲೇಯಿಂಗ್ ಇಲೆವೆನ್​ಗೆ ಕಮ್​ಬ್ಯಾಕ್ ಮಾಡ್ತಾರ ನೋಡಬೇಕು. ಕರ್ಣ್ ಶರ್ಮಾ ಮಾರಕವಾಗಿದ್ದಾರೆ.

8 / 8
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ

ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್

ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ

ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..

ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?