- Kannada News Photo gallery Cricket photos Kannada News | SRH vs RCB Royal Challengers Bangalore Players Practice in Hyderabad for Sunrisers Hyderabad
SRH vs RCB: ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ
ಹೈದರಾಬಾದ್ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎಸ್ಆರ್ಹೆಚ್- ಆರ್ಸಿಬಿ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ.
Updated on: May 18, 2023 | 12:45 PM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿರುವ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಹೈದರಾಬಾದ್ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಆರ್ಸಿಬಿ ಆಟಗಾರರು ಭರ್ಜರಿ ನಡೆಸುತ್ತಿದ್ದಾರೆ. ಕೊಹ್ಲಿ, ಫಾಫ್ ಸೇರಿದಂತೆ ಬೆಂಗಳೂರಿನ ಎಲ್ಲ ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಆರ್ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ. ಪ್ಲೇ ಆಫ್ ರೇಸ್ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ.

ಆರ್ಸಿಬಿ ತಂಡ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್ಆರ್ ತಂಡವನ್ನು ಕೇವಲ 59 ರನ್ಗಳಿಗೆ ಆಲೌಟ್ ಮಾಡಿತ್ತು.

ಬ್ಯಾಟಿಂಗ್ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.

ಬೌಲಿಂಗ್ನಲ್ಲಿ ಆರ್ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.
