ಈ IPL ನಲ್ಲೂ RCBಗೆ ಸೋಲು: SRH ವಿನ್ನರ್..!
RCB vs SRH: 2016ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಹಾಗೂ ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಮೊದಲು ಬ್ಯಾಟ್ ಮಾಡಿದ ಡೇವಿಡ್ ವಾರ್ನರ್ ನಾಯಕತ್ವದ SRH ತಂಡವು 7 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ವಿರಾಟ್ ಕೊಹ್ಲಿ ನಾಯಕತ್ವದ RCB ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಲಷ್ಟೇ ಶಕ್ತರಾದರು.
Updated on:Jan 14, 2024 | 7:38 AM

ಅಹದಾಬಾದ್ನಲ್ಲಿ ನಡೆದ ಇಂಡಿಯನ್ ಪತಂಗ್ ಲೀಗ್ (IPL) ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಮಕರ ಸಂಕ್ರಾಂತಿ ಮತ್ತು ಲೋಹ್ರಿ ಹಬ್ಬದ ಪ್ರಯುಕ್ತ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನವರು ಆಯೋಜಿಸಿದ್ದ ಈ ಗಾಳಿಪಟ ಸ್ಪರ್ಧೆಯಲ್ಲಿ ಐಪಿಎಲ್ನ 10 ತಂಡಗಳ ಅಭಿಮಾನಿಗಳು ಸ್ಪರ್ಧಿಸಿದ್ದರು.

ಅದರಂತೆ ಫೈನಲ್ ಸ್ಪರ್ಧೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ಅಭಿಮಾನಿಗಳು ಮುಖಾಮುಖಿಯಾಗಿದ್ದವು. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅಂತಿಮ ಹಣಾಹಣಿಯಲ್ಲಿ ಎಸ್ಆರ್ಹೆಚ್ ಮೇಲುಗೈ ಸಾಧಿಸುವ ಮೂಲಕ ಆರ್ಸಿಬಿಗೆ ಸೋಲುಣಿಸಿದೆ. ಈ ಮೂಲಕ ಸನ್ರೈಸರ್ಸ್ ಹೈದರಾಬಾದ್ 2024ರ ಇಂಡಿಯನ್ ಪತಂಗ್ ಲೀಗ್ನ ವಿನ್ನರ್ ಆಗಿ ಹೊರಹೊಮ್ಮಿದೆ.

ವಿಶೇಷ ಎಂದರೆ 2016ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಹಾಗೂ ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಮೊದಲು ಬ್ಯಾಟ್ ಮಾಡಿದ ಡೇವಿಡ್ ವಾರ್ನರ್ ನಾಯಕತ್ವದ SRH ತಂಡವು 7 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ವಿರಾಟ್ ಕೊಹ್ಲಿ ನಾಯಕತ್ವದ RCB ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಕೇವಲ 8 ರನ್ಗಳಿಂದ ಸೋಲನುಭವಿಸಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡಿತು.

ಇದೀಗ ಇಂಡಿಯನ್ ಪತಂಗ್ ಲೀಗ್ನಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಜಯ ಸಾಧಿಸಿದೆ. ಈ ಮೂಲಕ 2016ರ ಆರ್ಸಿಬಿ ಪಾಲಿನ ಸೋಲಿನ ಕಹಿ ಘಟನೆಯನ್ನು ಮತ್ತೆ ನೆನಪಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಸನ್ರೈಸರ್ಸ್ ಹೈದರಾಬಾದ್ ತಂಡ: ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಮಾರ್ಕೊ ಯಾನ್ಸೆನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಹೆನ್ರಿಕ್ ಕ್ಲಾಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ. ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ನಿತೀಶ್ ಕುಮಾರ್ ರೆಡ್ಡಿ, ಫಜಲ್ಹಕ್ ಫಾರೂಕಿ, ಶಹಬಾಝ್ ಅಹ್ಮದ್, ಟ್ರಾವಿಸ್ ಹೆಡ್, ವನಿಂದು ಹಸರಂಗ, ಪ್ಯಾಟ್ ಕಮ್ಮಿನ್ಸ್, ಜಯದೇವ್ ಉನಾದ್ಕತ್, ಆಕಾಶ್ ಸಿಂಗ್ , ಜಾತವೇಧ್ ಸುಬ್ರಮಣ್ಯನ್.
Published On - 7:35 am, Sun, 14 January 24
























