ಲಂಕಾ ತಂಡಕ್ಕೆ ಬಿಗ್ ಶಾಕ್; ಇಬ್ಬರು ಆಟಗಾರರಿಗೆ ಇಂಜುರಿ! ಒಬ್ಬ ಟೂರ್ನಿಯಿಂದಲೇ ಔಟ್
Asia Cup 2023: ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ ಪಂದ್ಯಾವಳಿಗೆ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ನಿನ್ನೆಯಷ್ಟೇ ಲಂಕಾ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿತ್ತು. ಇದೀಗ ತಂಡದ ಇಬ್ಬರು ಆಟಗಾರರು ಇಂಜುರಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.
1 / 6
ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ ಪಂದ್ಯಾವಳಿಗೆ ಮುನ್ನ ಶ್ರೀಲಂಕಾ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ನಿನ್ನೆಯಷ್ಟೇ ಲಂಕಾ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿತ್ತು. ಇದೀಗ ತಂಡದ ಇಬ್ಬರು ಆಟಗಾರರು ಇಂಜುರಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.
2 / 6
ವರದಿ ಪ್ರಕಾರ, ತಂಡದ ಸ್ಟಾರ್ ವೇಗಿ ದುಷ್ಮಂತ ಚಮೀರ ಮತ್ತು ಸ್ಪಿನ್ನರ್ ವನಿಂದು ಹಸರಂಗ ಇಂಜುರಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ದುಷ್ಮಂತ ಚಮೀರ ಟೂರ್ನಿಯಿಂದಲೇ ಹೊರಬೀಳುವ ಸಾಧ್ಯತೆ ಇದ್ದು, ಹಸರಂಗ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
3 / 6
ಹಸರಂಗ ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ಬಿ-ಲವ್ ಕ್ಯಾಂಡಿಯನ್ನು ಚಾಂಪಿಯನ್ ಮಾಡಿದ್ದರು. ಇಡೀ ಲೀಗ್ನಲ್ಲಿ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಮಿಂಚಿದ ಹಸರಂಗ ಪಂದ್ಯಾವಳಿಯ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.
4 / 6
ಲಂಕಾ ಪ್ರೀಮಿಯರ್ ಲೀಗ್ ವೇಳೆ ಇಂಜುರಿಗೆ ತುತ್ತಾಗಿದ್ದ ಚಮೀರ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಸರಣಿಯಲ್ಲಿ ಆರು ವಿಕೆಟ್‌ಗಳನ್ನು ಪಡೆದು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ ಈ ಇಬ್ಬರು ಸ್ಟಾರ್ ಆಟಗಾರರ ಅನುಪಸ್ಥಿತಿ ಲಂಕಾ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.
5 / 6
ESPNCricinfo ವರದಿಯ ಪ್ರಕಾರ, ಶ್ರೀಲಂಕಾ ತಂಡದ ಮ್ಯಾನೇಜರ್ ಮಹಿಂದಾ ಹಲಂಗೋಡ ನೀಡಿರುವ ಹೇಳಿಕೆಯ ಪ್ರಕಾರ, ಹಸರಂಗ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿರುದ್ಧದ ಗುಂಪು-ಹಂತದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಇನ್ನು ಭುಜದ ನೋವಿನಿಂದ ಬಳಲುತ್ತಿರುವ ಚಮೀರಾ ಇಡೀ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
6 / 6
ಏತನ್ಮಧ್ಯೆ, ಲಂಕಾ ತಂಡದ ಪ್ರಮುಖ ಬ್ಯಾಟರ್ಗಳಾದ ಪೆರೇರಾ ಮತ್ತು ಫರ್ನಾಂಡೋ ಇಬ್ಬರೂ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಇಬ್ಬರು ಏಷ್ಯಾಕಪ್ ಆರಂಭಕ್ಕೂ ಮುನ್ನ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಟೂರ್ನಿ ಆರಂಭಕ್ಕೂ ಮುನ್ನ ಈ ಇಬ್ಬರಿಗೂ ಮತ್ತೊಂದು ಪರೀಕ್ಷೆ ನಡೆಸಲಾಗುವುದು. ಅದರಲ್ಲಿ ಈ ಇಬ್ಬರ ವರದಿ ನೆಗೆಟಿವ್ ಬಂದರೆ, ಈ ಇಬ್ಬರನ್ನು ತಂಡದಲ್ಲಿ ಆಡಿಸಲಾಗುವುದು ಎಂದು ವರದಿಯಾಗಿದೆ.