AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ್ಯಂಡರ್ಸನ್ ಲಾರ್ಡ್ಸ್ ದಾಖಲೆ ಮುರಿದ ಏಂಜೆಲೊ ಮ್ಯಾಥ್ಯೂಸ್

Sri Lanka vs New Zealand, 1st Test: ಗಾಲೆ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ತಂಡದ ಹಿರಿಯ ಆಲ್​ರೌಂಡರ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಗಾಲೆ ಇಂಟರ್​ನ್ಯಾಷನಲ್ ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Sep 18, 2024 | 2:33 PM

Share
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ತಂಡದ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಒಂದೇ ಮೈದಾನದಲ್ಲಿ ಅತೀ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 5
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್​ ಇಂಗ್ಲೆಂಡ್​ನ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿತ್ತು. ಅ್ಯಂಡರ್ಸನ್ ಇಂಗ್ಲೆಂಡ್ ಪರ ಒಟ್ಟು 188 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇದೇ ವೇಳೆ ಲಾರ್ಡ್ಸ್ ಮೈದಾನದಲ್ಲಿ 29  ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ಮೂಲಕ ಒಂದೇ ಮೈದಾನದಲ್ಲಿ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನಾಡಿದ ದಾಖಲೆ ನಿರ್ಮಿಸಿದ್ದರು.

2 / 5
ಇದೀಗ ಗಾಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಏಂಜೆಲೊ ಮ್ಯಾಥ್ಯೂಸ್, ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಲಂಕಾ ಪರ ಮ್ಯಾಥ್ಯೂಸ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 30 ಪಂದ್ಯಗಳನ್ನು ಗಾಲೆ ಮೈದಾನದಲ್ಲಿ ಆಡಿದ್ದಾರೆ.

3 / 5
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆಯನ್ನು ಏಂಜೆಲೊ ಮ್ಯಾಥ್ಯೂಸ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಅಪರೂಪದ ದಾಖಲೆ ಬರೆಯುವಲ್ಲಿ 37 ವರ್ಷದ ಮ್ಯಾಥ್ಯೂಸ್ ಯಶಸ್ವಿಯಾಗಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಶ್ರೀಲಂಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರರಾದ ದಿಮುತ್ ಕರುಣರತ್ನೆ (2) ಹಾಗೂ ಪಾತುಮ್ ನಿಸ್ಸಂಕಾ (27) ಬೇಗನೆ ಔಟಾದರು. ಇನ್ನು ದಿನೇಶ್ ಚಂಡಿಮಲ್ 30 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಕಮಿಂದು ಮೆಂಡಿಸ್ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಅದರಂತೆ 52 ಓವರ್​ಗಳ ಮುಕ್ತಾಯದ ವೇಳೆ ಶ್ರೀಲಂಕಾ ತಂಡವು 4 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ