ಅ್ಯಂಡರ್ಸನ್ ಲಾರ್ಡ್ಸ್ ದಾಖಲೆ ಮುರಿದ ಏಂಜೆಲೊ ಮ್ಯಾಥ್ಯೂಸ್
Sri Lanka vs New Zealand, 1st Test: ಗಾಲೆ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ತಂಡದ ಹಿರಿಯ ಆಲ್ರೌಂಡರ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಗಾಲೆ ಇಂಟರ್ನ್ಯಾಷನಲ್ ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ.
1 / 5
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ತಂಡದ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಒಂದೇ ಮೈದಾನದಲ್ಲಿ ಅತೀ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
2 / 5
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಇಂಗ್ಲೆಂಡ್ನ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿತ್ತು. ಅ್ಯಂಡರ್ಸನ್ ಇಂಗ್ಲೆಂಡ್ ಪರ ಒಟ್ಟು 188 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇದೇ ವೇಳೆ ಲಾರ್ಡ್ಸ್ ಮೈದಾನದಲ್ಲಿ 29 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ಮೂಲಕ ಒಂದೇ ಮೈದಾನದಲ್ಲಿ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನಾಡಿದ ದಾಖಲೆ ನಿರ್ಮಿಸಿದ್ದರು.
3 / 5
ಇದೀಗ ಗಾಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಏಂಜೆಲೊ ಮ್ಯಾಥ್ಯೂಸ್, ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಲಂಕಾ ಪರ ಮ್ಯಾಥ್ಯೂಸ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 30 ಪಂದ್ಯಗಳನ್ನು ಗಾಲೆ ಮೈದಾನದಲ್ಲಿ ಆಡಿದ್ದಾರೆ.
4 / 5
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆಯನ್ನು ಏಂಜೆಲೊ ಮ್ಯಾಥ್ಯೂಸ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟೆಸ್ಟ್ನಲ್ಲಿ ಅಪರೂಪದ ದಾಖಲೆ ಬರೆಯುವಲ್ಲಿ 37 ವರ್ಷದ ಮ್ಯಾಥ್ಯೂಸ್ ಯಶಸ್ವಿಯಾಗಿದ್ದಾರೆ.
5 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಶ್ರೀಲಂಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರರಾದ ದಿಮುತ್ ಕರುಣರತ್ನೆ (2) ಹಾಗೂ ಪಾತುಮ್ ನಿಸ್ಸಂಕಾ (27) ಬೇಗನೆ ಔಟಾದರು. ಇನ್ನು ದಿನೇಶ್ ಚಂಡಿಮಲ್ 30 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಕಮಿಂದು ಮೆಂಡಿಸ್ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಅದರಂತೆ 52 ಓವರ್ಗಳ ಮುಕ್ತಾಯದ ವೇಳೆ ಶ್ರೀಲಂಕಾ ತಂಡವು 4 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ.