- Kannada News Photo gallery Cricket photos Sri Lanka’s Dimuth Karunaratne to retired From International Cricket
100ನೇ ಪಂದ್ಯದ ಸೋಲಿನೊಂದಿಗೆ ದಿಮುತ್ ಕರುಣರತ್ನೆ ವಿದಾಯ
Dimuth Karunaratne: ಶ್ರೀಲಂಕಾ ತಂಡದ ಎಡಗೈ ಆರಂಭಿಕ ಆಟಗಾರ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಲಂಕಾ ಪರ 237 ಇನಿಂಗ್ಸ್ ಆಡಿರುವ ಅವರು ಒಟ್ಟು 8538 ರನ್ ಕಲೆಹಾಕಿದ್ದಾರೆ. ಈ ಮೂಲಕ ತಮ್ಮ 36ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
Updated on:Feb 09, 2025 | 11:54 AM

ಶ್ರೀಲಂಕಾ ತಂಡದ ಸ್ಟಾರ್ ಆಟಗಾರ ದಿಮುತ್ ಕರುಣರತ್ನೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಗಾಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ದಿಮುತ್ ಇಂಟರ್ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ವಿಶೇಷ ಎಂದರೆ ಇದು ದಿಮುತ್ ಕರುಣರತ್ನೆ ಅವರ 100ನೇ ಟೆಸ್ಟ್ ಪಂದ್ಯವಾಗಿತ್ತು.

ಈ ಸ್ಮರಣೀಯ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ದಿಮುತ್ ಮೊದಲ ಇನಿಂಗ್ಸ್ನಲ್ಲಿ 36 ರನ್ಗಳಿಸಿದರೆ, ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 14 ರನ್ ಬಾರಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ತಮ್ಮ 100ನೇ ಪಂದ್ಯದಲ್ಲಿ ಕೇವಲ 40 ರನ್ ಮಾತ್ರ ಕಲೆಹಾಕಿದ್ದಾರೆ. ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡವು 9 ವಿಕೆಟ್ಗಳ ಹೀನಾಯ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಲಂಕಾ ದಾಂಡಿಗ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ಗೆ ಗುಡ್ ಬೈ ಹೇಳಿದ್ದಾರೆ.

36 ವರ್ಷದ ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಒಟ್ಟು 100 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 191 ಇನಿಂಗ್ಸ್ ಆಡಿರುವ ಅವರು 1 ದ್ವಿಶತಕ, 16 ಶತಕಗಳೊಂದಿಗೆ ಒಟ್ಟು 7222 ರನ್ ಕಲೆಹಾಕಿದ್ದಾರೆ. ಹಾಗೆಯೇ 39 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

ಇನ್ನು ಶ್ರೀಲಂಕಾ ಪರ 50 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ದಿಮುತ್ ಕರುಣರತ್ನೆ 46 ಇನಿಂಗ್ಸ್ಗಳಿಂದ ಒಟ್ಟು 1316 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದಾಗ್ಯೂ ಅವರು ಲಂಕಾ ಪರ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿಲ್ಲ.

2011 ರಲ್ಲಿ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ದಿಮುತ್ ಕರುಣರತ್ನೆ ಶ್ರೀಲಂಕಾ ಪರ ಒಟ್ಟು 237 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 17 ಶತಕ ಹಾಗೂ 50 ಅರ್ಧಶತಕಗಳೊಂದಿಗೆ ಒಟ್ಟು 8538 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಶ್ರೀಲಂಕಾದ 12ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ದಿಮುತ್ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ.
Published On - 11:53 am, Sun, 9 February 25
























