AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರೇ ‘ಚಾಂಪಿಯನ್ಸ್​’!

IPL 2026 Final, Royal Challengers Bengaluru vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮೇ 31) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on: May 30, 2026 | 12:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಫೈನಲ್ ಪಂದ್ಯದಲ್ಲಿ ಗೆಲ್ಲೋರು ಯಾರು? ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಹಾರ್ದಿಕ್ ಪಾಂಡ್ಯ ಜೊತೆಗೆ ನಿಂತವರು. ಅಂದರೆ ಐಪಿಎಲ್ ಪ್ರಿ-ಸೀಸನ್ ಫೋಟೋಶೂಟ್‌ನಲ್ಲಿ ಯಾರು ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಲ್ಲುತ್ತಾರೋ, ಅವರೇ ಆ ವರ್ಷದ ಐಪಿಎಲ್ ಚಾಂಪಿಯನ್ ಆಗ್ತಾರೆ!" ಇದಕ್ಕೆ ಸಾಕ್ಷಿಯೇ ಈ ಫೋಟೋಗಳು... (PC: IPL)

1 / 5
ಐಪಿಎಲ್ 2023: ಆ ವರ್ಷ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಪಕ್ಕದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ನಿಂತಿದ್ದರು. ಅಂತಿಮವಾಗಿ ಆ ಸೀಸನ್‌ನಲ್ಲಿ ಸಿಎಸ್‌ಕೆ ಚಾಂಪಿಯನ್ ಪಟ್ಟ ಅಲಂಕರಿಸಿತು. (PC: IPL)

2 / 5
ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಾಯಕ ಶ್ರೇಯಸ್ ಅಯ್ಯರ್ ನಿಂತಿದ್ದರು. ಆ ವರ್ಷ ಕೆಕೆಆರ್ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತು. (PC: IPL)

3 / 5
ಐಪಿಎಲ್ 2025: ಕಳೆದ ವರ್ಷದ ಫೋಟೋಶೂಟ್‌ನಲ್ಲೂ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಂತಿದ್ದ ತಂಡದ ನಾಯಕನೇ ಐಪಿಎಲ್ ಟ್ರೋಫಿ ಎತ್ತಿ ಹಿಡಿದರು. ಅಂದರೆ ಐಪಿಎಲ್ 2025 ರಲ್ಲಿ ಪಾಂಡ್ಯ ಜೊತೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ನಿಂತಿದ್ದರು. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. (PC: IPL)

4 / 5
ಐಪಿಎಲ್ 2026: ಈ ಬಾರಿಯ ಐಪಿಎಲ್​ ಪ್ರಿ-ಸೀಸನ್ ಫೋಟೋಶೂಟ್​ನಲ್ಲಿ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿ ನಿಂತಿರುವುದು ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್. ಹೀಗಾಗಿ ಈ ಬಾರಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲಿದೆಯಾ? ಅಥವಾ ಈ ಟ್ರೆಂಡ್​ಗೆ ಆರ್​ಸಿಬಿ ಇತಿಶ್ರೀ ಹಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. (PC: IPL)

5 / 5
Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ

ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್

ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ

ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​

ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?

ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ

KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ

ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!