ಮ್ಯಾಥ್ಯೂ ವೇಡ್ ಬದಲು ಈ ಸ್ಟಾರ್ ಆಲ್ರೌಂಡರ್ಗೆ ಆಸ್ಟ್ರೇಲಿಯಾ ಟಿ20 ತಂಡದ ನಾಯಕತ್ವ
Australia T20 Captain: 2024ರ ಟಿ20 ವಿಶ್ವಕಪ್ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ತಂಡದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಿದೆ.
1 / 7
2024ರ ಟಿ20 ವಿಶ್ವಕಪ್ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ತಂಡದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಿದೆ.
2 / 7
ಮುಂದಿನ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಕಾಂಗರೂ ತಂಡ ತನ್ನ ಸಿದ್ಧತೆಯತ್ತ ಮೊದಲ ಹೆಜ್ಜೆ ಇಟ್ಟಿದೆ. ನೂತನ ನಾಯಕನಾಗಿ ಮಿಚೆಲ್ ಮಾರ್ಷ್ ಅವರು ಮ್ಯಾಥ್ಯೂ ವೇಡ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.
3 / 7
ಮ್ಯಾಥ್ಯೂ ವೇಡ್ ಅವರ ನಾಯಕತ್ವದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತನ್ನ ಕೊನೆಯ ಟಿ20 ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಕೂಡ ತಂಡದ ಭಾಗವಾಗಿದ್ದರು. ನಾಯಕನಾಗುವ ಮೊದಲು ಟಿ20 ಆಟಗಾರನಾಗಿ ಮಾರ್ಷ್ ತನ್ನ ಕೊನೆಯ ಪಂದ್ಯದಲ್ಲಿ 30 ಎಸೆತಗಳಲ್ಲಿ 45 ರನ್ ಸಿಡಿಸಿದ್ದರು.
4 / 7
ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಇದುವರೆಗೆ 46 ಟಿ20 ಪಂದ್ಯಗಳನ್ನು ಆಡಿದ್ದು, 1086 ರನ್ ಗಳಿಸುವುದರ ಜೊತೆಗೆ 15 ವಿಕೆಟ್ ಪಡೆದಿದ್ದಾರೆ. 20 ಓವರ್‌ಗಳ ಕ್ರಿಕೆಟ್‌ನಲ್ಲಿ 24 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಬಳಿಸಿದ್ದುಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದರೊಂದಿಗೆ ಬ್ಯಾಟಿಂಗ್ನಲ್ಲಿ ಅಬ್ಬರಿಸಿರುವ ಮಾರ್ಷ್, 6 ಅರ್ಧಶತಕ ಸಿಡಿಸಿದ್ದಾರೆ.
5 / 7
ನಾಯಕನಾಗಿ ಮಿಚೆಲ್ ಮಾರ್ಷ್ ದಕ್ಷಿಣ ಆಫ್ರಿಕಾ ಪ್ರವಾಸದಿಂದ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 30 ರಿಂದ ಪ್ರಾರಂಭವಾಗುವ ಈ ಪ್ರವಾಸದಲ್ಲಿ ಆಸ್ಟ್ರೇಲಿಯಾವು 5 ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಬೇಕಾಗಿದೆ.
6 / 7
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆಸ್ಟ್ರೇಲಿಯಾ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಡರ್ಬನ್‌ನಲ್ಲಿ ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಈ ಸರಣಿ ಮುಗಿದ ನಂತರ ಏಕದಿನ ಸರಣಿ ಸಹ ನಡೆಯಲ್ಲಿದೆ.
7 / 7
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆನ್‌ಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಆಡಮ್ ಝಂಪಾ.