Champions Trophy: ಇಂಗ್ಲೆಂಡ್ ತಂಡದಿಂದ 6 ಸ್ಟಾರ್ ಆಟಗಾರರು ಕಿಕ್ ಔಟ್
Champions Trophy 2025: ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಬಲಿಷ್ಠ ಪಡೆಯನ್ನೇ ಪ್ರಕಟಿಸಿದೆ. 15 ಸದಸ್ಯರ ಈ ತಂಡದಲ್ಲಿ ಆರು ಪ್ರಮುಖ ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಅದರಲ್ಲೂ ಇಂಗ್ಲೆಂಡ್ನ ಆಲ್ರೌಂಡರ್ಗಳಾದ ಸ್ಯಾಮ್ ಕರನ್ ಹಾಗೂ ಬೆನ್ ಸ್ಟೋಕ್ಸ್ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
1 / 8
ಚಾಂಪಿಯನ್ಸ್ ಟ್ರೋಫಿ 2025 ಕ್ಕಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಯುವ ಆಟಗಾರನಾಗಿ ಜೇಕಬ್ ಬೆಥೆಲ್ ಕಾಣಿಸಿಕೊಂಡರೆ, ಅನುಭವಿ ದಾಂಡಿಗನಾಗಿ ಜೋ ರೂಟ್ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಆರು ಪ್ರಮುಖ ಆಟಗಾರರಿಗೆ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಆ ಆಟಗಾರರು ಯಾರೆಂದರೆ...
2 / 8
ಬೆನ್ ಸ್ಟೋಕ್ಸ್: ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಚಾಂಪಿಯನ್ಸ್ ಟ್ರೋಫಿ ಮೂಲಕ ಏಕದಿನ ಕ್ರಿಕೆಟ್ಗೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದರು. ಇದಾಗ್ಯೂ ಸ್ಟೋಕ್ಸ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂಬುದು ವಿಶೇಷ. ಹೀಗಾಗಿ ಏಕದಿನ ಕ್ರಿಕೆಟ್ನಲ್ಲಿ ಬೆನ್ ಸ್ಟೋಕ್ಸ್ ಯುಗಾಂತ್ಯವಾಗಿದೆ ಎನ್ನಬಹುದು.
3 / 8
ವಿಲ್ ಜಾಕ್ಸ್: ಕಳೆದ ಕೆಲ ಸರಣಿಗಳಿಂದ ಇಂಗ್ಲೆಂಡ್ ತಂಡದ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿದ್ದ ಆಲ್ರೌಂಡರ್ ವಿಲ್ ಜಾಕ್ಸ್ ಅವರನ್ನು ಸಹ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ರೂಟ್ಗೆ ಸ್ಥಾನ ನೀಡಲಾಗಿದೆ.
4 / 8
ಸ್ಯಾಮ್ ಕರನ್: ಯುವ ಆಲ್ರೌಂಡರ್ ಸ್ಯಾಮ್ ಕರನ್ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡದಿರುವುದೇ ಅಚ್ಚರಿ. ಏಕದಿನ ವಿಶ್ವಕಪ್ ವೇಳೆ ತಂಡದಲ್ಲಿದ್ದ ಸ್ಯಾಮ್ ಅವರನ್ನು ಈ ಬಾರಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯ್ಕೆಗೆ ಪರಿಗಣಿಸಿಲ್ಲ.
5 / 8
ಜಾನಿ ಬೈರ್ಸ್ಟೋವ್: ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್ಸ್ಟೋವ್ ಅವರನ್ನು ಸಹ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಾಮಿ ಸ್ಮಿತ್ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
6 / 8
ರೀಸ್ ಟೋಪ್ಲಿ: ಎಡಗೈ ವೇಗಿ ರೀಸ್ ಟೋಪ್ಲಿ ಕೂಡ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರ ಬದಲಿಗೆ ಈ ಬಾರಿ ಪ್ರಮುಖ ವೇಗಿಯಾಗಿ ಸಾಕಿಬ್ ಮಹಮೂದ್ ಅವರನ್ನು ಆಯ್ಕೆ ಮಾಡಲಾಗಿದೆ.
7 / 8
ಕ್ರಿಸ್ ವೋಕ್ಸ್: ಅನುಭವಿ ಬೌಲಿಂಗ್ ಆಲ್ರೌಂಡರ್ ಕ್ರಿಸ್ ವೋಕ್ಸ್ ಕೂಡ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಈ ಬಾರಿ ಜೇಮೀ ಓವರ್ಟನ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡ ಈ ಕೆಳಗಿನಂತಿದೆ...
8 / 8
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್ , ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.