AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಇಬ್ಬರು ಆಟಗಾರರು ನಿವೃತ್ತಿ

ODI retirement: ಬುಧವಾರ (ಮಾ.5) ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಅದು ಸಹ ಎರಡು ತಂಡಗಳ ಅತ್ಯಂತ ಹಿರಿಯ ಆಟಗಾರರು ಎಂಬುದು ವಿಶೇಷ. ಅಂದರೆ ಬಾಂಗ್ಲಾದೇಶ್ ತಂಡದಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್ ರಹೀಮ್ ಹಾಗೂ ಆಸ್ಟ್ರೇಲಿಯಾ ತಂಡದ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 06, 2025 | 7:30 AM

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಏಕದಿನ ಕ್ರಿಕೆಟ್​ನಿಂದ ಇಬ್ಬರು ಆಟಗಾರರು ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದರೆ, ಅತ್ತ ಬಾಂಗ್ಲಾದೇಶ್ ತಂಡದ ಹಿರಿಯ ಆಟಗಾರ ಮುಶ್ಫಿಕುರ್ ರಹೀಮ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

1 / 5
ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

2 / 5
ಇನ್ನು ಬಾಂಗ್ಲಾದೇಶ್ ಪರ 274 ಏಕದಿನ ಪಂದ್ಯಗಳನ್ನಾಡಿರುವ ಮುಶ್ಫಿಕುರ್ ರಹೀಮ್ 256	ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 7795 ರನ್ ಕಲೆಹಾಕಿದ್ದಾರೆ. ಇದರ ನಡುವೆ 9 ಶತಕ ಹಾಗೂ 49 ಅರ್ಧಶತಕಗಳನ್ನು ಬಾರಿಸಿದ್ದಾರೆ.

3 / 5
ಇದೀಗ 37ನೇ ವಯಸ್ಸಿಗೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಮುಶ್ಪಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಅತ್ತ ಸ್ಟೀವ್ ಸ್ಮಿತ್ ಕೂಡ ಟೆಸ್ಟ್ ಹಾಗೂ ಟಿ20 ತಂಡಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

4 / 5
ಆದರೆ 2024ರ ಟಿ20 ವಿಶ್ವಕಪ್​ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ನೀಡಲಾಗಿರಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಮುಂಬರುವ ದಿನಗಳಲ್ಲಿ ಸ್ಮಿತ್ ಅವರನ್ನು ಟಿ20 ಕ್ರಿಕೆಟ್​ಗೆ ಪರಿಗಣಿಸುವ ಸಾಧ್ಯತೆಯಿಲ್ಲ. ಅದರಂತೆ ಸ್ಟೀವ್ ಸ್ಮಿತ್ ಹಾಗೂ ಮುಶ್ಫಿಕುರ್ ರಹೀಮ್ ಮುಂಬರುವ ದಿನಗಳಲ್ಲಿ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎನ್ನಬಹುದು.

5 / 5
Follow us