Steve Smith: ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್

| Updated By: ಝಾಹಿರ್ ಯೂಸುಫ್

Updated on: Jan 28, 2024 | 8:10 AM

Steve Smith Record: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 7ನೇ ಆಸ್ಟ್ರೇಲಿಯನ್ ಎನಿಸಿಕೊಂಡಿದ್ದಾರೆ.

1 / 6
ಬ್ರಿಸ್ಬೇನ್​ನ ದಿ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಸ್ಟೀವ್ ಸ್ಮಿತ್ (Steve Smith) ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 33* ರನ್​ ಬಾರಿಸುವುದರೊಂದಿಗೆ ಸ್ಮಿತ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 16 ಸಾವಿರ ರನ್ ಪೂರೈಸಿದರು.

2 / 6
ಈ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 16000 ರನ್ ಕಲೆಹಾಕಿದ ವಿಶ್ವದ 33ನೇ ಆಟಗಾರ ಎನಿಸಿಕೊಂಡರು. ಹಾಗೆಯೇ ಅತೀ ವೇಗವಾಗಿ 16 ಸಾವಿರ ರನ್ ಕಲೆಹಾಕಿದ ಆಸ್ಟ್ರೇಲಿಯನ್ ಬ್ಯಾಟರ್ ಎಂಬ ದಾಖಲೆಯನ್ನು ಸ್ಟೀವ್ ಸ್ಮಿತ್ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಪಂಟರ್ ಖ್ಯಾತಿಯ ಪಾಂಟಿಂಗ್ 386 ಇನಿಂಗ್ಸ್​ಗಳ ಮೂಲಕ 16 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಹಿಂದಿಕ್ಕಿ ಸ್ಟೀವ್ ಸ್ಮಿತ್ ಅಗ್ರಸ್ಥಾನಕ್ಕೇರಿದ್ದಾರೆ.

4 / 6
ಇದೀಗ 381 ಇನಿಂಗ್ಸ್​ಗಳ ಮೂಲಕ 16 ಸಾವಿರ ರನ್ ಪೂರೈಸಿರುವ ಸ್ಟೀವ್ ಸ್ಮಿತ್, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಪರ ಅತೀ ವೇಗವಾಗಿ 16000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಆಸೀಸ್​ನ 7ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.

5 / 6
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ 16 ಸಾವಿರ ರನ್​ ಪೂರೈಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಕೇವಲ 350 ಇನಿಂಗ್ಸ್​ಗಳ ಮೂಲಕ 16000 ರನ್ ಕಲೆಹಾಕಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

6 / 6
ಗೆಲುವಿನತ್ತ ಆಸ್ಟ್ರೇಲಿಯಾ: ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 311 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡ 9 ವಿಕೆಟ್ ನಷ್ಟಕ್ಕೆ 289 ಡಿಕ್ಲೇರ್ ಘೋಷಿಸಿತು. ದ್ವಿತೀಯ ಇನಿಂಗ್ಸ್​ನಲ್ಲಿ ವೆಸ್ಟ್ ಇಂಡೀಸ್ ತಂಡ 193 ರನ್​ಗಳಿಗೆ ಸರ್ವಪತನ ಕಂಡಿದೆ. ಇತ್ತ ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 2 ವಿಕೆಟ್ ಕಳೆದುಕೊಂಡು 60 ರನ್ ಕಲೆಹಾಕಿದ್ದು, ಗೆಲ್ಲಲು ಇನ್ನು ಕೇವಲ 156 ರನ್​ಗಳ ಅವಶ್ಯಕತೆಯಿದೆ.