WTC Final 2023: ಟೀಮ್ ಇಂಡಿಯಾ ವಿರುದ್ಧ ದಾಖಲೆಯ ಶತಕ ಸಿಡಿಸಿದ ಸ್ಟೀವ್ ಸ್ಮಿತ್

| Updated By: ಝಾಹಿರ್ ಯೂಸುಫ್

Updated on: Jun 08, 2023 | 3:57 PM

Steve Smith Century: ಈ ಪಂದ್ಯದಲ್ಲಿ ಸ್ಮಿತ್​ಗೂ ಮುನ್ನ ಟ್ರಾವಿಸ್ ಹೆಡ್ ಶತಕ ಬಾರಿಸಿದ್ದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಹೆಡ್ ಸ್ಪೋಟಕ ಬ್ಯಾಟಿಂಗ್ ಮೂಲಕ ಟೀಮ್ ಇಂಡಿಯಾ ಬೌಲರ್​ಗಳ ಬೆಂಡೆತ್ತಿದ್ದರು.

1 / 8
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಶತಕ ಬಾರಿಸಿದ್ದಾರೆ.

2 / 8
ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ ಅತ್ಯುತ್ತಮ ರಕ್ಷಣಾತ್ಮಕ ಆಟದೊಂದಿಗೆ ಗಮನ ಸೆಳೆದಿದ್ದರು. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಬೌಲರ್​ಗಳನ್ನು ಕಾಡಿದ್ದ ಸ್ಮಿತ್ 227 ಎಸೆತಗಳಲ್ಲಿ 95 ರನ್​ಗಳಿಸಿ ಅಜೇಯರಾಗಿ ಉಳಿದಿದ್ದರು.

3 / 8
2ನೇ ದಿನದಾಟದ 2ನೇ ಎಸೆತದಲ್ಲೇ ಫೋರ್ ಬಾರಿಸಿದ ಸ್ಟೀವ್ ಸ್ಮಿತ್ ಮತ್ತೊಂದು ರನ್​ ಕಲೆಹಾಕುವ ಮೂಲಕ 229 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಇದರೊಂದಿಗೆ ಟೀಮ್ ಇಂಡಿಯಾ ವಿರುದ್ಧ ಅತ್ಯಧಿಕ ಟೆಸ್ಟ್ ಶತಕ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 8
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಪಾಂಟಿಂಗ್ ಟೀಮ್ ಇಂಡಿಯಾ ವಿರುದ್ಧ ಒಟ್ಟು 8 ಟೆಸ್ಟ್ ಶತಕಗಳನ್ನು ಸಿಡಿಸಿ ದಾಖಲೆ ಬರೆದಿದ್ದರು.

5 / 8
ಇದೀಗ 9ನೇ ಶತಕದೊಂದಿಗೆ ಭಾರತದ ವಿರುದ್ದ ಅತೀ ಹೆಚ್ಚು ಟೆಸ್ಟ್ ಶತಕ ಬಾರಿಸಿದ ಆಸೀಸ್ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿರುವ ಇಂಗ್ಲೆಂಡ್​ನ ಜೋ ರೂಟ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

6 / 8
ಜೋ ರೂಟ್ ಭಾರತದ ವಿರುದ್ಧದ ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 9 ಶತಕಗಳನ್ನು ಬಾರಿಸಿದ್ದಾರೆ. ಇದೀಗ ಓವಲ್ ಮೈದಾನದಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಂಚುರಿ ಸಿಡಿಸಿ ಜೋ ರೂಟ್ ಅವರ 9 ಶತಕಗಳ ದಾಖಲೆಯನ್ನು ಸ್ಮಿತ್ ಸರಿಗಟ್ಟಿರುವುದು ವಿಶೇಷ.

7 / 8
ಇನ್ನು ಈ ಪಂದ್ಯದಲ್ಲಿ ಸ್ಮಿತ್​ಗೂ ಮುನ್ನ ಟ್ರಾವಿಸ್ ಹೆಡ್ ಶತಕ ಬಾರಿಸಿದ್ದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಹೆಡ್ ಸ್ಪೋಟಕ ಬ್ಯಾಟಿಂಗ್ ಮೂಲಕ ಟೀಮ್ ಇಂಡಿಯಾ ಬೌಲರ್​ಗಳ ಬೆಂಡೆತ್ತಿದ್ದರು. ಅಲ್ಲದೆ ಕೇವಲ 106 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು.

8 / 8
ಇದೀಗ ಸ್ಮಿತ್ ಹಾಗೂ ಹೆಡ್ ಅವರ ಜುಗಲ್​ಬಂಧಿಯೊಂದಿಗೆ ಆಸ್ಟ್ರೇಲಿಯಾ ತಂಡವು 90 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 351 ರನ್​ ಕಲೆಹಾಕಿದೆ.