AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ ಕ್ರಿಕೆಟ್​ನಲ್ಲಿ ಮತ್ತೊಂದು ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾದ ಬ್ಯಾಟಿಂಗ್ ದಿಗ್ಗಜ ಸ್ಟೀವ್ ಸ್ಮಿತ್ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 11,000 ರನ್ ಪೂರೈಸಿದ ವಿಶ್ವದ ಗಣ್ಯ ಬ್ಯಾಟರ್‌ಗಳ ಸಾಲಿಗೆ ಸೇರಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲನ್ನು ತಲುಪುವ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 22, 2026 | 1:11 PM

Share
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ತಮ್ಮ ಸುದೀರ್ಘ ಹಾಗೂ ಯಶಸ್ವಿ ಕ್ರಿಕೆಟ್ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಸ್ಮಿತ್, ಈಗ 11,000 ಟೆಸ್ಟ್ ರನ್ ಪೂರೈಸಿದ ಬ್ಯಾಟರ್‌ಗಳ ಪಟ್ಟಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. (PC: Gettyimages)

1 / 5
ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 28 ರನ್ ಪೇರಿಸುವ ಮೂಲಕ ಸ್ಟೀವ್ ಸ್ಮಿತ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 11 ಸಾವಿರ ರನ್ ಗಳಿಸಿದ ವಿಶ್ವದ 12ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. (PC: Gettyimages)

2 / 5
ಹಾಗೆಯೇ ಆಸ್ಟ್ರೇಲಿಯಾದ ಪರವಾಗಿ ಈ ಸಾಧನೆ ಮಾಡಿದ ಕೇವಲ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸ್ಟೀವ್ ಸ್ಮಿತ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಾಜಿ ನಾಯಕರಾದ ರಿಕಿ ಪಾಂಟಿಂಗ್ ಮತ್ತು ಅಲನ್ ಬಾರ್ಡರ್ ಮಾತ್ರ ಆಸ್ಟ್ರೇಲಿಯಾ ಪರ ಟೆಸ್ಟ್​ನಲ್ಲಿ 11 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. (PC: Gettyimages)

3 / 5
ಇನ್ನು ಸ್ಟೀವ್ ಸ್ಮಿತ್ ಕೇವಲ 11,000 ರನ್ ಗಳಿಸಿದ್ದಷ್ಟೇ ಅಲ್ಲದೆ, ಅತ್ಯಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ವಿಶ್ವದ 5ನೇ ಅತಿ ವೇಗದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಈ ಸಾಧನೆಯನ್ನು ತಮ್ಮ 226ನೇ ಇನ್ನಿಂಗ್ಸ್‌ನಲ್ಲಿ ಪೂರ್ಣಗೊಳಿಸಿದ್ದಾರೆ. ಈ ಹಾದಿಯಲ್ಲಿ ಅವರು ರಾಹುಲ್ ದ್ರಾವಿಡ್ ಮತ್ತು ಜಾಕ್ಸ್​ ಕಾಲಿಸ್ (ಇಬ್ಬರೂ 234 ಇನ್ನಿಂಗ್ಸ್) ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. (PC: Gettyimages)

4 / 5
2010ರಲ್ಲಿ ಲೆಗ್-ಸ್ಪಿನ್ನರ್ ಆಗಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಸ್ಟೀವ್ ಸ್ಮಿತ್, ನಂತರ ಕಠಿಣ ಪರಿಶ್ರಮದಿಂದ ಆಧುನಿಕ ಕ್ರಿಕೆಟ್‌ನ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಆಗಿ ರೂಪಾಂತರಗೊಂಡರು. ಪ್ರಸ್ತುತ 10,000ಕ್ಕೂ ಹೆಚ್ಚು ಟೆಸ್ಟ್ ರನ್ ಗಳಿಸಿರುವ ವಿಶ್ವದ ಸಕ್ರಿಯ ಆಟಗಾರರಲ್ಲಿ ಇಂಗ್ಲೆಂಡ್‌ನ ಜೋ ರೂಟ್ ನಂತರದ ಸ್ಥಾನ ಸ್ಮಿತ್ ಅವರದ್ದಾಗಿದೆ. 55ಕ್ಕೂ ಹೆಚ್ಚಿನ ಅದ್ಭುತ ಬ್ಯಾಟಿಂಗ್ ಸರಾಸರಿ ಹಾಗೂ 37 ಶತಕಗಳನ್ನು ಹೊಂದಿರುವ ಸ್ಮಿತ್ ಅವರ ಈ ಸಾಧನೆ, ಅವರನ್ನು ಟೆಸ್ಟ್ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರ ಸಾಲಿನಲ್ಲಿ ನಿಲ್ಲಿಸಿದೆ. (PC: Gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್

ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್

ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ

ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ

ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ

ಆನೆ ಸೋಮಣ್ಣನ ರಂಪಾಟಕ್ಕೆ ಮುರಿದು ಬಿದ್ದ ದೇವಿಯ ಕೈ

ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್

ಬಿಗ್ ಬಾಸ್ ಮನೆಯಲ್ಲಿ ಕಳ್ಳರ ಕೈಚಳಕ; ಸೆಕ್ಯುರಿಟಿ ಕಣ್ಣು ತಪ್ಪಿಸಿ ಕಳ್ಳತನ

ಆಂಧ್ರದಲ್ಲಿ ಕಟ್ಟಿಗೆ ಬಡಿದಾಟದ ವೇಳೆ ಕಾಲ್ತುಳಿತ, ಓರ್ವ ಸಾವು

ಪೂಜೆಗೆ ತೆರಳುತ್ತಿದ್ದ ಸಚಿವರು, ಶಾಸಕರನ್ನು ಅಡ್ಡಗಟ್ಟಿದ ಎಸ್‌ಪಿ ರಿಷ್ಯಂತ್