AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರವೇಗದ ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್

Steve Smith Century Records: ಬಿಗ್ ಬ್ಯಾಷ್ ಲೀಗ್‌ನ 37ನೇ ಪಂದ್ಯದಲ್ಲಿ ಇಬ್ಬರು ಅನುಭವಿ ದಾಂಡಿಗರು ಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಡೇವಿಡ್ ವಾರ್ನರ್ ಶತಕ ಬಾರಿಸಿದರೆ, ದ್ವಿತೀಯ ಇನಿಂಗ್ಸ್ ನಲ್ಲಿ ಸ್ಟೀವ್ ಸ್ಮಿತ್ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಸ್ಮಿತ್ ಭರ್ಜರಿ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 17, 2026 | 7:35 AM

Share
ಬಿಗ್ ಬ್ಯಾಷ್ ಲೀಗ್‌ನಲ್ಲಿ ಸ್ಟೀವ್ ಸ್ಮಿತ್ (Steve Smith) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಬಿಬಿಎಲ್ ನ 37ನೇ ಪಂದ್ಯದಲ್ಲಿ ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 7
ಸಿಡ್ನಿಯ ಎಸ್ ಸಿ ಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 65 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್ ಗಳೊಂದಿಗೆ ಅಜೇಯ 110 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ಸಿಡ್ನಿ ಥಂಡರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು.

2 / 7
190 ರನ್ ಗಳ ಗುರಿ ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ಪರ ಸ್ಟೀವ್ ಸ್ಮಿತ್ ಸ್ಫೋಟಕ ಇನಿಂಗ್ಸ್ ಆಡಿದರು. ಮೊದಲ ಓವರ್‌ನಿಂದಲೇ ಅಬ್ಬರಿಸಿದ ಸ್ಮಿತ್ ಕೇವಲ 41 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ ಶತಕ ಪೂರೈಸಿದರು.

3 / 7
ಈ ಶತಕದೊಂದಿಗೆ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆಯನ್ನು ಸ್ಟೀವ್ ಸ್ಮಿತ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು.

4 / 7
ಬಿಗ್ ಬ್ಯಾಷ್ ಲೀಗ್‌ನಲ್ಲಿ ಈವರೆಗೆ 31 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 3 ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಬಿಬಿಎಲ್ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎನ್ನುವ ದಾಖಲೆ ನಿರ್ಮಿಸಿದ್ದರು.

5 / 7
ಇದೀಗ ಈ ದಾಖಲೆಯನ್ನು ಸ್ಟೀವ್ ಸ್ಮಿತ್ ಅಳಿಸಿ ಹಾಕಿದ್ದಾರೆ. ಬಿಗ್ ಬ್ಯಾಷ್ ಲೀಗ್‌ನಲ್ಲಿ ಈವರೆಗೆ 55 ಇನಿಂಗ್ಸ್ ಆಡಿರುವ ಸ್ಮಿತ್ ಒಟ್ಟು 4 ಶತಕ ಬಾರಿಸಿದ್ದಾರೆ. ಈ ಮೂಲಕ ಬಿಬಿಎಲ್ ನ ಸೆಂಚುರಿ ಸರದಾರ ಎನಿಸಿಕೊಂಡಿದ್ದಾರೆ.

6 / 7
ಇನ್ನು ಸ್ಟೀವ್ ಸ್ಮಿತ್ ಬಾರಿಸಿದ ಈ ಶತಕದೊಂದಿಗೆ ಸಿಡ್ನಿ ಡರ್ಬಿ ಪಂದ್ಯದಲ್ಲಿ ಸಿಕ್ಸರ್ಸ್ ತಂಡ ಜಯಭೇರಿ ಬಾರಿಸಿದೆ. ಸಿಡ್ನಿ ಥಂಡರ್ ನೀಡಿದ 190 ರನ್ ಗಳ ಗುರಿಯನ್ನು ಸಿಡ್ನಿ ಸಿಕ್ಸರ್ಸ್ ಕೇವಲ 17.2 ಓವರ್‌ಗಳಲ್ಲಿ ಚೇಸ್ ಮಾಡಿ 5 ವಿಕೆಟ್‌ಗಳ ಗೆಲುವು ದಾಖಲಿಸಿದೆ.

7 / 7

Published On - 7:34 am, Sat, 17 January 26

ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್

ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..

6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?

ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್

ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..

ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?

ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್

ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ