AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಇತಿಹಾಸ ರಚಿಸಿದ ಸ್ಟೀವ್ ಸ್ಮಿತ್

Australia vs India: ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಮೆಲ್ಬೋರ್ನ್​​ನಲ್ಲಿ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​​ನಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ದಾಖಲೆಯನ್ನು ಸ್ಮಿತ್ ತಮ್ಮದಾಗಿಸಿಕೊಂಡರು. ಇದರ ಜೊತೆಗೆ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸಹ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 28, 2024 | 7:53 AM

Share
ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬಲಿಷ್ಠ ಭಾರತ ತಂಡದ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆಯೊಂದಿಗೆ ಎಂಬುದು ವಿಶೇಷ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶೀಸಿದ್ದರು. ಟೀಮ್ ಇಂಡಿಯಾ ವೇಗಿಗಳನ್ನು ಅತ್ಯುತ್ತಮವಾಗಿ ಎದುರಿಸಿದ ಸ್ಮಿತ್ 197 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 13 ಫೋರ್​​ಗಳೊಂದಿಗೆ 140 ರನ್ ಬಾರಿಸಿದರು. ಈ ಶತಕದೊಂದಿಗೆ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.

2 / 6
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಭಾರತದ ವಿರುದ್ಧ ಮೂರು ಸ್ವರೂಪಗಳಲ್ಲಿ 111 ಇನಿಂಗ್ಸ್ ಆಡಿರುವ ಪಾಂಟಿಂಗ್ ಒಟ್ಟು 14 ಸೆಂಚುರಿ ಸಿಡಿಸಿ ಈ ವಿಶೇಷ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸ್ಮಿತ್ ಅಳಿಸಿ ಹಾಕಿದ್ದಾರೆ.

3 / 6
ಸ್ಟೀವ್ ಸ್ಮಿತ್ ಟೀಮ್ ಇಂಡಿಯಾ ವಿರುದ್ಧ ಈವರೆಗೆ ಒಟ್ಟು 62 ಪಂದ್ಯಗಳನ್ನಾಡಿದ್ದು, ಈ ವೇಳೆ 78	ಇನಿಂಗ್ಸ್ ಆಡಿದ್ದಾರೆ. ಇದರ ನಡುವೆ 15 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ತಂಡದ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ 144 ಇನಿಂಗ್ಸ್ ಆಡಿರುವ ಸಚಿನ್ 20 ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ.

5 / 6
ಇದೀಗ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ 11 ಶತಕ ಹಾಗೂ ಏಕದಿನ ಕ್ರಿಕೆಟ್​ನಲ್ಲಿ 4 ಶತಕ ಸಿಡಿಸಿರುವ ಸ್ಟೀವ್ ಸ್ಮಿತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು ಇನ್ನೂ 6 ಸೆಂಚುರಿಗಳನ್ನು ಬಾರಿಸಬೇಕಿದೆ. ಪ್ರಸ್ತುತ ಟೆಸ್ಟ್ ಸರಣಿ ಹಾಗೂ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸ್ಮಿತ್ ಅಬ್ಬರಿಸಿದರೆ ಈ ದಾಖಲೆಯನ್ನು ಮುರಿಯಬಹುದು.

6 / 6
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್