ಟೆಸ್ಟ್ ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್
Sri Lanka vs Australia, 1st Test: ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ಗಾಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಆಸ್ಟ್ರೇಲಿಯಾ ಪರ ಆರಂಭಿಕರಾದ ಉಸ್ಮಾನ್ ಖ್ವಾಜಾ (65*) ಹಾಗೂ ಟ್ರಾವಿಸ್ (57) ಅರ್ಧಶತಕ ಬಾರಿಸಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ ಟೆಸ್ಟ್ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.
Updated on: Jan 29, 2025 | 12:20 PM

ಟೆಸ್ಟ್ ಕ್ರಿಕೆಟ್ನಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಗಾಲೆ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 1 ರನ್ ಗಳಿಸುವ ಮೂಲಕ ಸ್ಟೀವ್ ಸ್ಮಿತ್ ಟೆಸ್ಟ್ನಲ್ಲಿ 10000 ರನ್ ಪೂರೈಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ರಿಕಿ ಪಾಂಟಿಂಗ್ (13378) ಹಾಗೂ ಅಲನ್ ಬಾರ್ಡರ್ (11174) ಈ ದಾಖಲೆ ಬರೆದಿದ್ದರು. ಇದೀಗ ಈ ಸಾಧಕ ಪಟ್ಟಿಗೆ ಸ್ಟೀವ್ ಸ್ಮಿತ್ ಕೂಡ ಎಂಟ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್ ಇತಿಹಾಸದಲ್ಲಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 15ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಸಾಧನೆಯೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ 5ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ರಾಹುಲ್ ದ್ರಾವಿಡ್ ಇದ್ದರು. ದ್ರಾವಿಡ್ 206 ಇನಿಂಗ್ಸ್ಗಳ ಮೂಲಕ 10 ಸಾವಿರ ರನ್ ಪೂರೈಸಿದ್ದರು.

ಇದೀಗ ಸ್ಟೀವ್ ಸ್ಮಿತ್ 205 ಇನಿಂಗ್ಸ್ಗಳ ಮೂಲಕ 10 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ಗಳ ಮೈಲುಗಲ್ಲು ಮುಟ್ಟಿದ ವಿಶ್ವದ 5ನೇ ಬ್ಯಾಟರ್ ಹಾಗೂ ಆಸ್ಟ್ರೇಲಿಯಾದ 2ನೇ ದಾಂಡಿಗ ಎನಿಸಿಕೊಂಡಿದ್ದಾರೆ.

ಇನ್ನು ಟೆಸ್ಟ್ ಇತಿಹಾಸದಲ್ಲಿ ಅತೀ ವೇಗವಾಗಿ 10 ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ನ ಬ್ರಿಯಾನ್ ಲಾರಾ, ಭಾರತದ ಸಚಿನ್ ತೆಂಡೂಲ್ಕರ್ ಹಾಗೂ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಈ ಮೂವರು ದಿಗ್ಗಜರು ಕೇವಲ 195 ಇನಿಂಗ್ಸ್ಗಳ ಮೂಲಕ 10000 ರನ್ ಪೂರೈಸಿದ್ದರು.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




