ವಿಶ್ವಕಪ್ಗೂ ಮುನ್ನ ಆಸೀಸ್ಗೆ ಬಿಗ್ ಶಾಕ್; ಇಬ್ಬರು ಸ್ಟಾರ್ ಆಟಗಾರರಿಗೆ ಇಂಜುರಿ! ತಂಡದಿಂದ ಕೋಕ್
ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಸ್ಟೀವ್ ಸ್ಮಿತ್ ಮತ್ತು ಮಿಚೆಲ್ ಸ್ಟಾರ್ಕ್ ಗಾಯಗೊಂಡಿರುವ ಕಾರಣ ಇಡೀ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಶುಕ್ರವಾರ ಖಚಿತಪಡಿಸಿದೆ. ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಕೆಲವೇ ದಿನಗಳು ಬಾಕಿ ಇರುವಾಗ ಆಟಗಾರರ ಇಂಜುರಿ ಆಸೀಸ್ ಪಾಳಯದಲ್ಲಿ ಆತಂಕ ಹುಟ್ಟಿಸಿದೆ.
Updated on: Aug 18, 2023 | 6:09 PM

ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಸ್ಟೀವ್ ಸ್ಮಿತ್ ಮತ್ತು ಮಿಚೆಲ್ ಸ್ಟಾರ್ಕ್ ಗಾಯಗೊಂಡಿರುವ ಕಾರಣ ಇಡೀ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಶುಕ್ರವಾರ ಖಚಿತಪಡಿಸಿದೆ. ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಕೆಲವೇ ದಿನಗಳು ಬಾಕಿ ಇರುವಾಗ ಆಟಗಾರರ ಇಂಜುರಿ ಆಸೀಸ್ ಪಾಳಯದಲ್ಲಿ ಆತಂಕ ಹುಟ್ಟಿಸಿದೆ.

ಸ್ಮಿತ್ ಸ್ನಾಯುರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ನಾಲ್ಕು ವಾರಗಳ ಕಾಲ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ಡಬ್ಲ್ಯುಟಿಸಿ ಫೈನಲ್ ಮತ್ತು ಆ್ಯಶಸ್ ಸರಣಿಯ ನಂತರ ತೊಡೆಸಂದು ನೋವಿಗೆ ತುತ್ತಾಗಿದ್ದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಕೂಡ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ.

ಈ ಇಬ್ಬರಿಗೂ ಮುನ್ನ ಆಸೀಸ್ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಇಂಜುರಿಗೊಳಗಾಗಿದ್ದರು. ಹೀಗಾಗಿ ಅವರು ಸಹ ಆಫ್ರಿಕಾ ಸರಣಿಯಲ್ಲಿ ಆಡುತ್ತಿಲ್ಲ. ಇದೀಗಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಇವರಿಬ್ಬರು ಫಿಟ್ ಆಗುವ ನಿರೀಕ್ಷೆಯಿದೆ.

ಏತನ್ಮಧ್ಯೆ, ಸ್ಮಿತ್ ಮತ್ತು ಸ್ಟಾರ್ಕ್ ಅಲಭ್ಯತೆ ಮಾರ್ನಸ್ ಲಬುಶೇನ್ಗೆ ಏಕದಿನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಸಹಕಾರಿಯಾಗಿದೆ. ಈ ಮೊದಲು ದಕ್ಷಿಣ ಆಫ್ರಿಕಾ ಸರಣಿಗೆ ಮತ್ತು ಏಕದಿನ ವಿಶ್ವಕಪ್‌ಗೆ ಲಬುಶೇನ್ರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಇಬ್ಬರು ಆಟಗಾರರ ಅಲಭ್ಯತೆಯಿಂದಾಗಿ ಲಬುಶೇನ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಗಮನಾರ್ಹವಾಗಿ, ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗುವ ಭಾರತದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಗೆ ಸ್ಮಿತ್ ಹಾಗೂ ಸ್ಟಾರ್ಕ್ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ತಂಡದ ಮುಖ್ಯ ಆಯ್ಕೆಗಾರ ಬೈಲಿ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟಿ20 ತಂಡದ ನಾಯಕನಾಗಿ ಬಡ್ತಿ ಪಡೆದಿದ್ದ ಮಾರ್ಷ್, ಇದೀಗ ಕಮ್ಮಿನ್ಸ್ ಬದಲಾಗಿ ಏಕದಿನ ಸರಣಿಯಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆಂಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆಶ್ಟನ್ ಟರ್ನರ್, ಆಡಮ್ ಝಂಪಾ

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ



















