AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 3 ರನ್​​ಗೆ 5 ವಿಕೆಟ್​: ಟಿ20 ಕ್ರಿಕೆಟ್​​ನಲ್ಲಿ ಸೂಫಿಯಾನ್ ವಿಶ್ವ ದಾಖಲೆ

Sufiyan Muqeem: ಪಾಕಿಸ್ತಾನ್ ಪರ ಈವರೆಗೆ 7 ಟಿ20 ಪಂದ್ಯಗಳನ್ನಾಡಿರುವ 25 ವರ್ಷದ ಸುಫಿಯಾನ್ ಮುಖೀಮ್ 14 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ ಕೇವಲ 3 ರನ್​​ಗೆ 5 ವಿಕೆಟ್ ಉರುಳಿಸಿ ಟಿ20 ಕ್ರಿಕೆಟ್​​ನಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

TV9 Web
| Edited By: |

Updated on: Dec 04, 2024 | 8:54 AM

Share
ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಪಾಕಿಸ್ತಾನ್ ತಂಡದ ಯುವ ಸ್ಪಿನ್ನರ್ ಸುಫಿಯಾನ್ ಮುಖೀಮ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 3 ರನ್​​ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡದ ಬ್ಯಾಟರ್​​ಗಳು ಸುಫಿಯಾನ್ ಮುಖೀಮ್​ ಅವರ ಸ್ಪಿನ್ ಮೋಡಿಗೆ ರನ್​​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಸಹ ಪರದಾಡಿದರು. ಇದರ ನಡುವೆ 2.4 ಓವರ್​ ಎಸೆದ ಸುಫಿಯಾನ್ ಕೇವಲ 3 ರನ್ ನೀಡಿ 5 ವಿಕೆಟ್ ಉರುಳಿಸಿದರು.

2 / 6
ಈ 3 ವಿಕೆಟ್​​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ರನ್ ನೀಡಿ 5 ವಿಕೆಟ್ ಕಬಳಿಸಿದ ಪಾಕ್ ಬೌಲರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಲ್ಲದೆ ಪೂರ್ಣ ಸದಸ್ಯ ರಾಷ್ಟ್ರದ ಪರ ಕಣಕ್ಕಿಳಿದು ಅತೀ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಪೂರ್ಣ ಸದಸ್ಯ ರಾಷ್ಟ್ರಗಳ ಪರ ಅತೀ ಕಡಿಮೆ ರನ್ ನೀಡಿ 5 ವಿಕೆಟ್ ಕಬಳಿಸಿದ ದಾಖಲೆ ಶ್ರೀಲಂಕಾದ ರಂಗನಾ ಹೆರಾತ್ (2014) ಹಾಗೂ ಅಫ್ಘಾನಿಸ್ತಾನದ ರಶೀದ್ ಖಾನ್ (2017) ಹೆಸರಿನಲ್ಲಿತ್ತು. ಈ ಇಬ್ಬರು ಬೌಲರ್​​ಗಳು ಕೇವಲ 3 ರನ್ ನೀಡಿ 5 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 2.4 ಓವರ್​​ಗಳನ್ನು ಎಸೆದ ಸುಫಿಯಾನ್, 16 ಎಸೆತಗಳಲ್ಲಿ ಕೇವಲ 3 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲಿ ಅತೀ ಕಡಿಮೆ ರನ್ ನೀಡಿ 5 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಸುಫಿಯಾನ್ ಮುಖೀಮ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಝಿಂಬಾಬ್ವೆ ತಂಡವು 12.4 ಓವರ್​​ಗಳಲ್ಲಿ 57 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 5.3 ಓವರ್​​ಗಳಲ್ಲಿ 61 ರನ್ ಬಾರಿಸಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ