AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಜಿಂಟಾ ಒಡೆತನದ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆದ ಕನ್ನಡಿಗ

Punjab Kings: ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (COE) ಸೇರಲಿದ್ದಾರೆ. ಈ ಮೂಲಕ ಯುವ ಆಟಗಾರರ ತರಬೇತಿ ಮತ್ತು ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ. ಇದು ಐಪಿಎಲ್ 2026 ಸಿದ್ಧತೆಗಳ ಭಾಗವಾಗಿ ಪಂಜಾಬ್ ಕಿಂಗ್ಸ್ ತಂಡದಲ್ಲಿನ ಪ್ರಮುಖ ಬದಲಾವಣೆಯಾಗಿದೆ.

ಪೃಥ್ವಿಶಂಕರ
|

Updated on: Oct 06, 2025 | 10:36 PM

Share
ಈಗಾಗಲೇ ಎಲ್ಲಾ ತಂಡಗಳು 2026 ರ ಐಪಿಎಲ್​ಗಾಗಿ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಿವೆ. ಆ ಪ್ರಕಾರ ಇತ್ತೀಚೆಗೆ, ಕೆಲವು ತಂಡಗಳು ಗಮನಾರ್ಹ ಬದಲಾವಣೆಗಳನ್ನು ಮಾಡಿವೆ. ಈಗ, ಬಾಲಿವುಡ್ ನಟಿ ಪ್ರೀತಿ ಜಿಂಟಾ ಅವರ ತಂಡ ಪಂಜಾಬ್ ಕಿಂಗ್ಸ್‌ನಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ತಂಡದ ಕೋಚಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕನ್ನಡಿಗ ಸುನಿಲ್ ಜೋಶಿ ಇದೀಗ ತಂಡವನ್ನು ತೊರೆದಿದ್ದಾರೆ.

1 / 5
ಭಾರತದ ಮಾಜಿ ಸ್ಪಿನ್ ಬೌಲರ್ ಸುನಿಲ್ ಜೋಶಿ ಪಂಜಾಬ್ ಕಿಂಗ್ಸ್ ತಂಡದೊಂದಿಗಿನ ತಮ್ಮ ಕೆಲಸಕ್ಕೆ ವಿದಾಯ ಹೇಳಿದ್ದಾರೆ. ಪಂಜಾಬ್ ಕಿಂಗ್ಸ್​ ತಂಡದಲ್ಲಿ ಸ್ಪಿನ್ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜೋಶಿ ಇದೀಗ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಜೋಶಿ ಈಗ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ಗೆ ಸೇರುತ್ತಿದ್ದು, ಇದಕ್ಕಾಗಿ ಅವರು ಪಂಜಾಬ್ ಕಿಂಗ್ಸ್ ತೊರೆದಿದ್ದಾರೆ ಎನ್ನಲಾಗುತ್ತಿದೆ.

2 / 5
ಕ್ರಿಕ್‌ಬಜ್ ವರದಿಯ ಪ್ರಕಾರ, ಸುನಿಲ್ ಜೋಶಿ ತಂಡವನ್ನು ತೊರೆಯುತ್ತಿರುವ ಬಗ್ಗೆ ಪತ್ರ ಬರೆದಿದ್ದಾರೆ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅಲ್ಲದೆ ಅವರು ತಮ್ಮ ನಿರ್ಧಾರವನ್ನು ವೈಯಕ್ತಿಕವಾಗಿ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅವರಿಗೆ ತಿಳಿಸಿದ್ದಾರೆ ಎಂತಲೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

3 / 5
ಜೋಶಿ ಈ ಹಿಂದೆ ಪಂಜಾಬ್ ಕಿಂಗ್ಸ್‌ನೊಂದಿಗೆ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರ ಅಡಿಯಲ್ಲಿ (2020-22ರ ನಡುವೆ) ಕೆಲಸ ಮಾಡಿದ್ದಾರೆ. ಹಾಗೆಯೇ ಅವರು ಸ್ವಲ್ಪ ಸಮಯದವರೆಗೆ ಉತ್ತರ ಪ್ರದೇಶ ರಾಜ್ಯ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದು ಮಾತ್ರವಲ್ಲದೆ ಟೀಂ ಇಂಡಿಯಾದ ಮುಖ್ಯ ಆಯ್ಕೆದಾರರಾಗಿಯೂ ಸೇವೆ ಸಲ್ಲಿಸಿದ್ದಾರೆ.

4 / 5
ಇದೀಗ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆದಿರುವ ಸುನಿಲ್ ಜೋಶಿ ಅವರು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್​ಗೆ ಸೇರಲಿದ್ದು, ಅವರು ಯುವ ಆಟಗಾರರ ಅಭಿವೃದ್ಧಿ ಮತ್ತು ತರಬೇತಿಯ ಮೇಲೆ ಗಮನಹರಿಸಲಿದ್ದಾರೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸುನಿಲ್ ಜೋಶಿ 1996 ಮತ್ತು 2001 ರ ನಡುವೆ ಭಾರತ ಪರ 15 ಟೆಸ್ಟ್ ಮತ್ತು 69 ಏಕದಿನ ಪಂದ್ಯಗಳನ್ನು ಆಡಿದ್ದು , ಒಟ್ಟು 110 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ