ಏಕದಿನ ವಿಶ್ವಕಪ್ ಗೆಲ್ಲಬಲ್ಲ 5 ತಂಡಗಳನ್ನು ಹೆಸರಿಸಿದ ಸುರೇಶ್ ರೈನಾ
TV9 Web | Updated By: ಝಾಹಿರ್ ಯೂಸುಫ್
Updated on:
Sep 18, 2023 | 11:03 PM
ODI World Cup 2023: 10 ತಂಡಗಳಲ್ಲಿ ಈ 5 ತಂಡಗಳು ಏಕದಿನ ವಿಶ್ವಕಪ್ ಗೆಲ್ಲುವ ಸಾಮರ್ಥ್ಯ ಹೊಂದಿದೆ. ಏಕೆಂದರೆ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಇಲ್ಲಿ ಪರಿಸ್ಥಿತಿಗೆ ಈ ತಂಡಗಳು ಬೇಗನೆ ಹೊಂದಿಕೊಳ್ಳುತ್ತವೆ. ಹೀಗಾಗಿ ಈ 5 ತಂಡಗಳಲ್ಲಿ 4 ತಂಡಗಳು ಸೆಮಿಫೈನಲ್ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಸುರೇಶ್ ರೈನಾ.
1 / 7
ಏಕದಿನ ವಿಶ್ವಕಪ್ಗೆ ಕೌಂಟ್ ಡೌನ್ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಮಹಾಸಮರಕ್ಕಾಗಿ ಈಗಾಗಲೇ ಎಲ್ಲಾ ತಂಡಗಳು ಭರ್ಜರಿ ಸಿದ್ಧತೆಯಲ್ಲಿದೆ. ಇದರ ನಡುವೆ ಈ ಬಾರಿ ಏಕದಿನ ವಿಶ್ವಕಪ್ ಗೆಲ್ಲಬಲ್ಲ 5 ತಂಡಗಳನ್ನು ಹೆಸರಿಸಿದ್ದಾರೆ ಸುರೇಶ್ ರೈನಾ.
2 / 7
ಈ ಬಗ್ಗೆ ಮಾತನಾಡಿರುವ ಸುರೇಶ್ ರೈನಾ, 10 ತಂಡಗಳಲ್ಲಿ ಈ 5 ತಂಡಗಳು ಏಕದಿನ ವಿಶ್ವಕಪ್ ಗೆಲ್ಲುವ ಸಾಮರ್ಥ್ಯ ಹೊಂದಿದೆ. ಏಕೆಂದರೆ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಇಲ್ಲಿ ಪರಿಸ್ಥಿತಿಗೆ ಈ ತಂಡಗಳು ಬೇಗನೆ ಹೊಂದಿಕೊಳ್ಳುತ್ತವೆ. ಹೀಗಾಗಿ ಈ 5 ತಂಡಗಳಲ್ಲಿ 4 ತಂಡಗಳು ಸೆಮಿಫೈನಲ್ನಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ.
3 / 7
ಅದರಂತೆ ಈ ಬಾರಿಯ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. 2011 ರ ಬಳಿಕ ಭಾರತದಲ್ಲಿ ಮತ್ತೊಮ್ಮೆ ವಿಶ್ವಕಪ್ ನಡೆಯುತ್ತಿದೆ. ಕಳೆದ ಬಾರಿ ನಾವು ಗೆದ್ದಿರುವುದರಿಂದ ಈ ಸಲ ಕೂಡ ಟೀಮ್ ಇಂಡಿಯಾ ಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ರೈನಾ ಅಭಿಪ್ರಾಯಪಟ್ಟಿದ್ದಾರೆ.
4 / 7
ಇನ್ನು ದ್ವಿತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾ ಇದೆ. ಆಸೀಸ್ ಪಡೆಯು ಐಸಿಸಿ ಟೂರ್ನಿಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಈ ಬಾರಿ ಕೂಡ ಆಸ್ಟ್ರೇಲಿಯಾ ತಂಡದಿಂದ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಲ್ಲೂ ಸೆಮಿಫೈನಲ್ನಲ್ಲಿ ಎದುರು ನೋಡಬಹುದು ಎಂದು ರೈನಾ ತಿಳಿಸಿದ್ದಾರೆ.
5 / 7
ಹಾಗೆಯೇ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಅತ್ಯುತ್ತಮ ಆಟಗಾರರನ್ನು ಒಳಗೊಂಡಿದೆ. ಹೀಗಾಗಿ ಆಂಗ್ಲರ ಪಡೆ ಕೂಡ ವಿಶ್ವ ಚಾಂಪಿಯನ್ ಪಟ್ಟವನ್ನು ಕಾಯ್ದುಕೊಳ್ಳುವತ್ತ ಅತ್ಯುತ್ತಮ ಪ್ರದರ್ಶನ ನೀಡಲಿದೆ.
6 / 7
ಇನ್ನು ಏಷ್ಯಾದಲ್ಲಿ ವಿಶ್ವಕಪ್ ನಡೆಯುತ್ತಿರುವುದರಿಂದ ಶ್ರೀಲಂಕಾ ತಂಡದಿಂದಲೂ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಈ ಬಾರಿಯ ಏಷ್ಯಾಕಪ್ನಲ್ಲಿ ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆಯೂ ಶ್ರೀಲಂಕಾ ದಿಟ್ಟ ಹೋರಾಟ ತೋರಿಸಿದೆ. ಹೀಗಾಗಿ ಲಂಕಾ ತಂಡ ಕೂಡ ಸೆಮಿಫೈನಲ್ ಪೈಪೋಟಿಯಲ್ಲಿ ಕಾಣಿಸಿಕೊಳ್ಳಬಹುದು.
7 / 7
ಏಕದಿನ ತಂಡಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿರುವ ಪಾಕಿಸ್ತಾನ್ ಟೀಮ್ನಿಂದ ಕೂಡ ಈ ಬಾರಿ ಅತ್ಯುತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಏಕೆಂದರೆ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯುತ್ತಿರುವುದರಿಂದ ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಪಾಕ್ ತಂಡಕ್ಕೆ ಕಷ್ಟವಾಗುವುದಿಲ್ಲ. ಹೀಗಾಗಿ ಪಾಕಿಸ್ತಾನ್ ತಂಡದಿಂದ ಕೂಡ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು ಎಂದು ಸುರೇಶ್ ರೈನಾ ತಿಳಿಸಿದ್ದಾರೆ.