ಜಿಂಬಾಬ್ವೆ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿ ಕೇವಲ 25 ಎಸೆತಗಳಲ್ಲಿ 61 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಸೂರ್ಯ ಅವರ ಅಮೋಘ ಪ್ರದರ್ಶನದಿಂದಾಗಿ ಭಾರತ 71 ರನ್‌ಗಳಿಂದ ಸುಲಭವಾಗಿ ಜಯ ಸಾಧಿಸಿತು. ಅದ್ಭುತ ಪ್ರದರ್ಶನ ನೀಡಿದ ಸೂರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದು, ಇದೀಗ ವಿರಾಟ್ ಕೊಹ್ಲಿ ದಾಖಲೆ ಅವರ ಗುರಿ ಸೇರಿದೆ.