IND vs ZIM: ಟಿ20 ವಿಶ್ವಕಪ್​ನಲ್ಲಿ ಯುವರಾಜ್​ ದಾಖಲೆ ಮುರಿದ ಸೂರ್ಯ! ಮುಂದಿನ ಟಾರ್ಗೆಟ್ ಕಿಂಗ್ ಕೊಹ್ಲಿ

| Updated By: ಪೃಥ್ವಿಶಂಕರ

Updated on: Nov 06, 2022 | 7:22 PM

Suryakumar Yadav: ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ ಈವರೆಗೆ 15 ಬಾರಿ ಈ ಪ್ರಶಸ್ತಿ ಗೆದ್ದಿದ್ದಾರೆ.

1 / 5
ಜಿಂಬಾಬ್ವೆ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿ ಕೇವಲ 25 ಎಸೆತಗಳಲ್ಲಿ 61 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಸೂರ್ಯ ಅವರ ಅಮೋಘ ಪ್ರದರ್ಶನದಿಂದಾಗಿ ಭಾರತ 71 ರನ್‌ಗಳಿಂದ ಸುಲಭವಾಗಿ ಜಯ ಸಾಧಿಸಿತು. ಅದ್ಭುತ ಪ್ರದರ್ಶನ ನೀಡಿದ ಸೂರ್ಯ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದು, ಇದೀಗ ವಿರಾಟ್ ಕೊಹ್ಲಿ ದಾಖಲೆ ಅವರ ಗುರಿ ಸೇರಿದೆ.

2 / 5
ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೂರನೇ ಆಟಗಾರ ಸೂರ್ಯಕುಮಾರ್. ಅವರು 8ನೇ ಬಾರಿಗೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದರೊಂದಿಗೆ 7 ಬಾರಿ ಈ ಪ್ರಶಸ್ತಿ ಗೆದ್ದಿದ್ದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ.

3 / 5
ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ ಈವರೆಗೆ 15 ಬಾರಿ ಈ ಪ್ರಶಸ್ತಿ ಗೆದ್ದಿದ್ದಾರೆ. ರೋಹಿತ್ ಶರ್ಮಾ 12 ಪ್ರಶಸ್ತಿಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

4 / 5
ಸೂರ್ಯಕುಮಾರ್ ಯುವರಾಜ್ ದಾಖಲೆ ಮುರಿದಿದ್ದು, ಈಗ ಅವರ ಕಣ್ಣು ವಿರಾಟ್ ಕೊಹ್ಲಿ ದಾಖಲೆಯತ್ತ ನೆಟ್ಟಿದೆ. ಸೂರ್ಯ ಜಿಂಬಾಬ್ವೆ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಮತ್ತೊಂದು ವಿಚಾರದಲ್ಲಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 5
ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಜಂಟಿಯಾಗಿ ಅತಿ ಹೆಚ್ಚು ಬಾರಿ ಪಂದ್ಯದ ಆಟಗಾರ ಪ್ರಶಸ್ತಿಯನ್ನು ಗೆದ್ದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಸೂರ್ಯ ಈ ವರ್ಷ 6 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದರೆ, ಕೊಹ್ಲಿ 2016 ರಲ್ಲಿ 6 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.