Suryakumar Yadav: ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

|

Updated on: Jul 28, 2024 | 8:29 AM

IND vs SL: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು ಆರಂಭದಲ್ಲಿ ದಿಟ್ಟ ಹೋರಾಟವನ್ನು ಪ್ರದರ್ಶಿಸಿದ್ದರು. ಆದರೆ 15ನೇ ಓವರ್​ಗಳ ಬಳಿಕ ದಿಢೀರ್ ಕುಸಿತಕ್ಕೊಳಗಾದ ಶ್ರೀಲಂಕಾ ತಂಡವು 19.2 ಓವರ್​ಗಳಲ್ಲಿ 170 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 43 ರನ್​ಗಳ ಜಯ ಸಾಧಿಸಿದೆ.

1 / 6
ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶುಭ್​ಮನ್ ಗಿಲ್ (34) ಹಾಗೂ ಯಶಸ್ವಿ ಜೈಸ್ವಾಲ್ (40) ಸ್ಪೋಟಕ ಆರಂಭ ಒದಗಿಸಿದ್ದರು.

2 / 6
ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿಲಾರಂಭಿಸಿದ ಸೂರ್ಯ ಲಂಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 6
ಅಲ್ಲದೆ 26 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 58 ರನ್ ಬಾರಿಸಿ ಔಟಾದರು. ಈ 58 ರನ್​ಗಳೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 200+ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುವ ಮೂಲಕ ಎಂಬುದು ವಿಶೇಷ.

4 / 6
ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಇದೀಗ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಆಸ್ಟ್ರೇಲಿಯಾದ ಸ್ಪೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರಿನಲ್ಲಿತ್ತು.

5 / 6
ಆಸ್ಟ್ರೇಲಿಯಾ ಪರ 104 ಟಿ20 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಒಟ್ಟು 8 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ ಅರ್ಧಶತಕಕ್ಕಿಂತ ಹೆಚ್ಚಿನ ರನ್ ಕಲೆಹಾಕಿದ್ದಾರೆ. ಇದೀಗ ಮ್ಯಾಕ್ಸ್​ವೆಲ್ ಹೆಸರಿನಲ್ಲಿದ್ದ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ನಾಯಕ ಯಶಸ್ವಿಯಾಗಿದ್ದಾರೆ.

6 / 6
ಸೂರ್ಯಕುಮಾರ್ ಯಾದವ್ ಭಾರತದ ಪರ ಒಟ್ಟು 66 ಟಿ20 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 9 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ 50 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ 50+ ಸ್ಕೋರ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.