ಜಯಸೂರ್ಯನ ಭರ್ಜರಿ ದಾಖಲೆ ಸೂರ್ಯನ ಪಾಲು

Updated on: May 27, 2025 | 9:56 AM

Suryakumar Yadav Records: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಮುಂದುವರೆದಿದೆ. ಕಳೆದ 14 ಇನಿಂಗ್ಸ್​ಗಳಲ್ಲಿ ಸತತವಾಗಿ 25+ ರನ್ ಕಲೆಹಾಕುವ ಮೂಲಕ ಸೂರ್ಯಕುಮಾರ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ ಐಪಿಎಲ್​ನಲ್ಲೂ ಹಲವು ದಾಖಲೆ ನಿರ್ಮಿಸಿದ್ದಾರೆ.

1 / 7
IPL 2025: ಐಪಿಎಲ್​ನ 69ನೇ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ (Suryakumar Yadav)  ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ ಮುಂಬೈ ಇಂಡಿಯನ್ಸ್ ಪರ ಸನತ್ ಜಯಸೂರ್ಯ ಬರೆದಿಟ್ಟಿದ್ದ ವಿಶೇಷ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ಈ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ....

2 / 7
ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ ಬಾರಿಸಿದ್ದರು.

3 / 7
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 57 ರನ್ ಬಾರಿಸಿದರು. ಈ ಇನಿಂಗ್ಸ್​ನಲ್ಲಿ ಮೂಡಿಬಂದ 2 ಸಿಕ್ಸ್​ಗಳೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಮುಂಬೈ ಇಂಡಿಯನ್ಸ್ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡರು.

4 / 7
ಇದಕ್ಕೂ ಮುನ್ನ ಈ ದಾಖಲೆ ಸನತ್ ಜಯಸೂರ್ಯ ಅವರ ಹೆಸರಿನಲ್ಲಿತ್ತು. 2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಜಯಸೂರ್ಯ ಒಟ್ಟು 31 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ.

5 / 7
ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 32 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ಪರ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 7
ಹಾಗೆಯೇ ಈ ಪಂದ್ಯದಲ್ಲಿ ಬಾರಿಸಿದ 57 ರನ್​ಗಳೊಂದಿಗೆ ಮುಂಬೈ ಇಂಡಿಯನ್ಸ್ ಪರ ಸೀಸನ್​ವೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2010ರ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್ ಬರೋಬ್ಬರಿ 618 ರನ್ ಕಲೆಹಾಕಿದ್ದರು. 

7 / 7
ಆದರೆ ಈ ಬಾರಿಯ ಐಪಿಎಲ್​ ಮೂಲಕ ಸೂರ್ಯಕುಮಾರ್ ಯಾದವ್ ಈ ಮೈಲುಗಲ್ಲನ್ನು ದಾಟಿದ್ದಾರೆ. 14 ಪಂದ್ಯಗಳ ಮೂಲಕ ಸೂರ್ಯಕುಮಾರ್ ಯಾದವ್ ಒಟ್ಟು 628 ರನ್​ ಕಲೆಹಾಕುವ ಮೂಲಕ ಮುಂಬೈ ಇಂಡಿಯನ್ಸ್ ಪರ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 15 ವರ್ಷಗಳ ಹಿಂದೆ ಬರೆದ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.