AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಯಾದವ್

IND vs NZ: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 3-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲಿ 7 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ 8 ವಿಕೆಟ್​ಗಳ ವಿಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳು ಬಾಕಿಯಿರುವಂತೆಯೇ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jan 26, 2026 | 11:10 AM

Share
ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ.

1 / 5
ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ 3ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯನ್ನು ಸೂರ್ಯ ಹಿಂದಿಕ್ಕಿದ್ದಾರೆ.

2 / 5
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 52 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ವೇಳೆ 32 ಮ್ಯಾಚ್​ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಇನ್ನು 18 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋತರೆ, 2 ಮ್ಯಾಚ್ ಟೈನಲ್ಲಿ ಅಂತ್ಯ ಕಂಡಿತ್ತು. ಹಾಗೆಯೇ ಎರಡು ಪಂದ್ಯಗಳು ರದ್ದಾಗಿದ್ದವು.

3 / 5
ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಒಟ್ಟು 41 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಬರೋಬ್ಬರಿ 33 ಪಂದ್ಯಗಳಲ್ಲಿ. ಅಲ್ಲದೆ ಸೋತಿರುವುದು ಕೇವಲ 6 ಮ್ಯಾಚ್​ಗಳಲ್ಲಿ ಮಾತ್ರ. ಇನ್ನು 2 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾಗಿದ್ದವು.

4 / 5
ಇನ್ನು ಭಾರತ ಟಿ20 ತಂಡದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರೆ, ಮಹೇಂದ್ರ ಸಿಂಗ್ ಧೋನಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಧೋನಿ 72 ಪಂದ್ಯಗಳಲ್ಲಿ 41 ಗೆಲುವು ತಂದುಕೊಟ್ಟಿದ್ದಾರೆ. ಅತ್ತ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ 62 ಟಿ20 ಪಂದ್ಯಗಳನ್ನಾಡಿದ್ದ ಟೀಮ್ ಇಂಡಿಯಾ 50 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

5 / 5
Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!

ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?

ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್

ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?

ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು

ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ

ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ