ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

Updated on: Feb 08, 2026 | 8:30 AM

Suryakumar Yadav Records: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಟೀಮ್ ಇಂಢಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 6
ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (virat kohli) ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಿದ್ದವು.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಭಾರತ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಾಯಕ ಸೂರ್ಯಕುಮಾರ್ ಯಾದವ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶೀಸಿದ್ದರು.

3 / 6
49 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 4 ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 84 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ತಂಡವು 20 ಓವರ್​ಗಳಲ್ಲಿ 161 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಿ 29 ರನ್​ಗಳಿಂದ ಸೋಲೊಪ್ಪಿಕೊಂಡಿತು.

4 / 6
ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಸೂರ್ಯಕುಮಾರ್ ಪಾಲಾಯಿತು.

5 / 6
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಎನಿಸಿಕೊಂಡಿದ್ದರು.

6 / 6
ಇದೀಗ ವಿರಾಟ್ ಕೊಹ್ಲಿಯ ಈ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 105 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On - 8:25 am, Sun, 8 February 26