ಸೂರ್ಯನ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

| Updated By: ಝಾಹಿರ್ ಯೂಸುಫ್

Updated on: Sep 24, 2023 | 10:57 PM

Suryakumar Yadav Record: ಕ್ಯಾಮರೋನ್ ಗ್ರೀನ್ ಎಸೆದ 44ನೇ ಓವರ್​ನಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸ್ ಸಿಡಿಸಿ ಅಬ್ಬರಿಸಿದರು. ಅಷ್ಟೇ ಅಲ್ಲದೆ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

1 / 6
ಇಂದೋರ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಕ್ಷರಶಃ ಅಬ್ಬರಿಸಿದ್ದರು. ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಅದರಲ್ಲೂ ಕ್ಯಾಮರೋನ್ ಗ್ರೀನ್ ಎಸೆದ 44ನೇ ಓವರ್​ನಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸ್ ಸಿಡಿಸಿ ಅಬ್ಬರಿಸಿದರು. ಅಷ್ಟೇ ಅಲ್ಲದೆ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 6
ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ.

4 / 6
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಕೇವಲ 24 ಎಸೆತಗಳಲ್ಲಿ ತೂಫಾನ್ ಹಾಫ್ ಸೆಂಚುರಿ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 72 ರನ್ ಬಾರಿಸಿ ಅಜೇಯರಾಗಿ ಉಳಿದರು. ಅಲ್ಲದೆ ಟೀಮ್ ಇಂಡಿಯಾ ಮೊತ್ತ 399 ಕ್ಕೆ ತಲುಪುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.