Suryakumar Yadav: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಸಿಕ್ಸರ್ ಸೂರ್ಯ
Suryakumar Yadav Records: ಸಿಕ್ಸರ್ ಸರದಾರ ಪಟ್ಟಿಯಲ್ಲಿ ರೋಹಿತ್ ಶರ್ಮಾ (182) ಅಗ್ರಸ್ಥಾನದಲ್ಲಿದ್ದರೆ, ಮಾರ್ಟಿನ್ ಗಪ್ಟಿಲ್ (173), ಆರೋನ್ ಫಿಂಚ್ (125), ಕ್ರಿಸ್ ಗೇಲ್ (124) ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 3 ಸಿಕ್ಸರ್ ಬಾರಿಸಿದರೆ ಈ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಬಹುದು.
Updated on: Dec 16, 2023 | 7:26 AM

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ (Suryakumar Yadav) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳೊಂದಿಗೆ ವಿರಾಟ್ ಕೊಹ್ಲಿಯನ್ನೂ ಕೂಡ ಹಿಂದಿಕ್ಕಿರುವುದು ವಿಶೇಷ.

ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಸೂರ್ಯಕುಮಾರ್ ಯಾದವ್ 56 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 100 ರನ್ ಬಾರಿಸಿದ್ದರು. ವಿಶೇಷ ಎಂದರೆ ಈ 8 ಸಿಕ್ಸ್ಗಳೊಂದಿಗೆ ಟೀಮ್ ಇಂಡಿಯಾದ 2ನೇ ಸಿಕ್ಸರ್ ಸರದಾರ ಎನಿಸಿಕೊಂಡರು.

ಅಂದರೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿಯನ್ನು ಸೂರ್ಯಕುಮಾರ್ ಹಿಂದಿಕ್ಕಿದ್ದಾರೆ. ಈ ಮೂಲಕ ದ್ವಿತೀಯ ಸ್ಥಾನಕ್ಕೇರಿದ್ದಾರೆ.

ಕಿಂಗ್ ಕೊಹ್ಲಿ 107 ಟಿ20 ಇನಿಂಗ್ಸ್ಗಳಿಂದ ಒಟ್ಟು 117 ಸಿಕ್ಸ್ಗಳನ್ನು ಬಾರಿಸಿದ್ದರು. ಇದೀಗ ಕೇವಲ 57 ಇನಿಂಗ್ಸ್ಗಳ ಮೂಲಕ ಸೂರ್ಯಕುಮಾರ್ ಯಾದವ್ ಒಟ್ಟು 123 ಸಿಕ್ಸ್ಗಳನ್ನು ಸಿಡಿಸಿದ್ದಾರೆ.

ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ಹಿಟ್ಮ್ಯಾನ್ 140 ಇನಿಂಗ್ಸ್ಗಳಿಂದ ಒಟ್ಟು 182 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಸದ್ಯ ಸಿಕ್ಸರ್ ಸರದಾರ ಪಟ್ಟಿಯಲ್ಲಿ ರೋಹಿತ್ ಶರ್ಮಾ (182) ಅಗ್ರಸ್ಥಾನದಲ್ಲಿದ್ದರೆ, ಮಾರ್ಟಿನ್ ಗಪ್ಟಿಲ್ (173), ಆರೋನ್ ಫಿಂಚ್ (125), ಕ್ರಿಸ್ ಗೇಲ್ (124) ನಂತರದ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 3 ಸಿಕ್ಸರ್ ಬಾರಿಸಿದರೆ ಈ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಬಹುದು.



















