Suryakumar Yadav: ಹಿಟ್ಮ್ಯಾನ್ ವಿಶ್ವ ದಾಖಲೆ ಮೇಲೆ ಸೂರ್ಯಕುಮಾರ್ ಕಣ್ಣು..!
Suryakumar Yadav: ಈ ಪಂದ್ಯದಲ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಕೂಡ ಸೂರ್ಯಕುಮಾರ್ ಯಾದವ್ ಮುಂದಿದೆ. ಅದು ಕೂಡ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
Updated on: Nov 29, 2022 | 6:30 PM

ಭಾರತ-ನ್ಯೂಜಿಲೆಂಡ್ ನಡುವಣ ಏಕದಿನ ಸರಣಿಯ ಮೂರನೇ ಪಂದ್ಯವು ಬುಧವಾರ ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಕಿವೀಸ್ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಅಂತಿಮ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸರಣಿ ಸಮಬಲಗೊಳಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಹೀಗಾಗಿ ಈ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

ಹಾಗೆಯೇ ಈ ಪಂದ್ಯದಲ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಕೂಡ ಸೂರ್ಯಕುಮಾರ್ ಯಾದವ್ ಮುಂದಿದೆ. ಅದು ಕೂಡ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಹೌದು, ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್ಮ್ಯಾನ್ 2019 ರಲ್ಲಿ 78 ಸಿಕ್ಸ್ಗಳನ್ನು ಬಾರಿಸುವ ಮೂಲಕ ಈ ದಾಖಲೆ ಬರೆದಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿಯುವ ಅವಕಾಶ ಸೂರ್ಯನ ಮುಂದಿದೆ.

ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 5 ಸಿಕ್ಸ್ ಬಾರಿಸಿದ್ದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಏಕೆಂದರೆ 2022 ರಲ್ಲಿ ಸೂರ್ಯ ಒಟ್ಟು 74 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಇದೀಗ ಹಿಟ್ಮ್ಯಾನ್ ದಾಖಲೆ ಮುರಿಯುವ ಹೊಸ್ತಿಲಿಗೆ ಬಂದು ನಿಂತಿದ್ದಾರೆ.

ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 5 ಸಿಕ್ಸ್ ಬಾರಿಸಿದ್ದೇ ಆದಲ್ಲಿ, ಹಿಟ್ಮ್ಯಾನ್ ನಿರ್ಮಿಸಿದ 3 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿದು ಸಿಕ್ಸರ್ ಕಿಂಗ್ ಎನಿಸಿಕೊಳ್ಳಬಹುದು.
























